Advertisement
ಸುದ್ದಿಗಳು

ರಾಷ್ಟ್ರೀಯ ಹೆದ್ದಾರಿಯಲ್ಲಿ ಜಾಲ್ಸೂರು ಸಮೀಪ ಅಡ್ಕಾರಿನಲ್ಲಿ ಭೀಕರ ಅಪಘಾತ- ಮೂರು ಸಾವು

Share

ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ಶುಕ್ರವಾರ ಸಂಜೆ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಮತ್ತು ಇನ್ನೋವ ಕಾರಿನ ಮಧ್ಯೆ ಉಂಟಾದ ಭೀಕರ ಅಪಘಾತದಲ್ಲಿ ಮೂರು ಮಂದಿ ಮೃತಪಟ್ಟಿದ್ದು ಮೂವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಪುತ್ತೂರು ಕಬಕದ ಮಹಮ್ಮದ್ ಸಾದಿಕ್(31), ಕೆದಿಲ ಕಂಪ ನಿವಾಸಿ ಮಜೀದ್(32), ಸುನೈನ(16) ಮೃತಪಟ್ಟವರು. ಕಾರಿನಲ್ಲಿದ್ದ ಸಾಲ್ವಿನ್ ಫಾರಿಕ್(10), ಮಹಮ್ಮದ್ ಜಕುವಾನ(14) ಮತ್ತು ಅಬೂಬಕ್ಕರ್(40) ಗಾಯಗೊಂಡವರು. ಕಾಸರಗೋಡಿನಿಂದ ಸುಳ್ಯಕ್ಕೆ ಬರುತ್ತಿದ್ದ ಕೇರಳ ರಸ್ತೆ ಸಾರಿಗೆ ಬಸ್ ಮತ್ತು ಸುಳ್ಯದಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರಿನ ಮಧ್ಯೆ ಶುಕ್ರವಾರ ಸಂಜೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗಜ್ಜಾಗಿದ್ದು ಗಂಭೀರ ಗಾಯಗೊಂಡ ಸಾದಿಕ್ ಮತ್ತು ಮಜೀದ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಗೊಂಡವರಿಗೆ ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಯಿತು. ಗಂಭೀರ ಗಾಯಗೊಂಡ ಸುನೈನಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾದರೂ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸುಳ್ಯ ವೃತ್ತ ನಿರೀಕ್ಷಕ ಸತೀಶ್‍ಕುಮಾರ್, ಎಸ್‍ಐ ಎಂ.ಆರ್.ಹರೀಶ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇಬ್ಬರ ಮದುವೆ ನಿಶ್ಚಿತವಾಗಿತ್ತು.
ಸಂಬಂಧಿಕರಾದ ಸಾಧಿಕ್ ಮತ್ತು ಮಜೀದ್ ಅವರ ಇಬ್ಬರ ಮದುವೆ ನಿಶ್ಚಿತವಾಗಿತ್ತು. ಮದುವೆಗೆ ಸಂಬಂಧಿಕರಿಗೆ ಆಮಂತ್ರಣ ನೀಡಲೆಂದು ಮಡಿಕೇರಿ, ಸುಳ್ಯಕ್ಕೆ ಹೋಗಿ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ವಾರದಲ್ಲಿ ಒಂದೇ ಜಾಗದಲ್ಲಿ ಎರಡನೇ ಅಪಘಾತ:
ಅಡ್ಕಾರ್ ಮಾವಿನಕಟ್ಟೆಯಲ್ಲಿ ವಾರದಲ್ಲಿ ಉಂಟಾದ ಎರಡನೇ ಭೀಕರ ಅಪಘಾತ ಇದಾಗಿದೆ. ಇದೇ ಸ್ಥಳದಲ್ಲಿ ಕಳೆದ ವಾರ ಕಾರು ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಕೊಡಗು ನಾಪೊಕ್ಲು ಕೊಟ್ಟಮುಡಿಯ ನಾಲ್ಕು ಮಂದಿ ಮೃತಪಟ್ಟಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

2 minutes ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

1 day ago

ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ

ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…

1 day ago

ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ

ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…

1 day ago

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

2 days ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

2 days ago