Political mirror

ರಿಯಾಝ್ ಕಟ್ಟೆಕ್ಕಾರ್ ಚುನಾವಣಾ ಪ್ರಚಾರ ಆರಂಭ

Share
ಸುಳ್ಯ: ನಗರ ಪಂಚಾಯತ್ ಬೂಡು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಿಯಾಝ್ ಕಟ್ಟೆಕ್ಕಾರ್ ಚುನಾವಣಾ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ಮನೆ ಮನೆ ಭೇಟಿ ನೀಡಿ ಪ್ರತಿಯೊಬ್ಬ ಮತದಾರರನ್ನೂ ಭೇಟಿ ಮಾಡಿ ಮತ ಕೇಳುವುದು ಇವರ ಪ್ರಚಾರ ತಂತ್ರ. ಕಳೆದ ಒಂದು ವರ್ಷದಿಂದ ಬೂಡು ವಾರ್ಡ್ ನ ಜನರ ಪ್ರತಿಯೊಂದು ಅಗತ್ಯತೆಗಳಿಗೂ ಸ್ಪಂದಿಸುತ್ತಾ ಜನ ಸೇವೆಯಲ್ಲಿ ತೊಡಗಿಕೊಂಡಿದ್ದೇನೆ. ಆದುದರಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಟಿಕೆಟ್ ಸಿಗದಕ್ಕೆ ಬೇಷರ ಇಲ್ಲ. 13 ಸಾವಿರಕ್ಕೂ ಹೆಚ್ಚು ಮತದಾರರಿರುವ ನಗರ ಪಂಚಯತ್ ನಲ್ಲಿ 20 ಮಂದಿಗೆ ಮಾತ್ರ ಪಕ್ಷಕ್ಕೆ ಸೀಟ್ ನೀಡಲು ಸಾಧ್ಯ. ಅದನ್ನು ನಾನು ಅರ್ಥ ಮಾಡಿಕೊಂಡಿದ್ದೇನೆ. ಬೂಡು ವಾರ್ಡ್ ನ ಜನರ ಒತ್ತಾಯದ ಮೇರೆಗೆ ಪಕ್ಷೇತರನಾಗಿ ಜನರ ಅಭ್ಯರ್ಥಿಯಾಗಿ  ಸ್ಪರ್ಧಿಸುತ್ತಿದ್ದೇನೆ. ಕಳೆದ ಒಂದು ವರುಷದಿಂದ ಮಾಡಿರುವ ಜನ ಸೇವೆಯನ್ನು ಗುರುತಿಸಿ ವಾರ್ಡ್ ನ ಹಲವು ಮಂದಿ ಹಿರಿಯರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಾಯಿಸಿದ್ದರು. ಹಿರಿಯರ ಮತ್ತು ವಾರ್ಡ್ ನಜನರ ಆಶೀರ್ವಾದದಿಂದ ಅಭ್ಯರ್ಥಿಯಾಗಿದ್ದೇನೆ. ಆದುದರಿಂದ ಗೆಲುವಿನ ವಿಶ್ವಾಸ ವಿದೆ ಎಂದು ‘ಸುಳ್ಯನ್ಯೂಸ್.ಕಾಂ’ ನೊಂದಿಗೆ ಮಾತನಾಡುತ್ತಾ ಅವರು ಹೇಳಿದರು.  ಇಲ್ಲಿನ ಮೂಲಭೂತ ಅಗತ್ಯತೆಗಳನ್ನು ಪೂರೈಸುವುದರೊಂದಿಗೆ ಬೂಡು ವಾರ್ಡ್ ನ  ಸರ್ವತೋಮುಖ ಅಭಿವೃದ್ಧಿ ತನ್ನ ಗುರಿ ಎಂದು ಅವರು ಹೇಳಿದ್ದಾರೆ.
ಸಾಮಾನ್ಯವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಮಧ್ಯೆ ನೇರ ಸ್ಪರ್ಧೆ ಏರ್ಪಡುತ್ತಿದ್ದ ಬೂಡು ವಾರ್ಡ್ ನಲ್ಲಿ ರಿಯಾಝ್ ಕಟ್ಟೆಕ್ಕಾರ್ ಪಕ್ಷೇತರನಾಗಿ ಎಂಟ್ರಿ ಕೊಟ್ಟಿರುವುದರಿಂದ ಈ ಬಾರಿ ತ್ರಿಕೋನ ಸ್ಪರ್ಧೆ ಯ ರಂಗು ಉಂಟಾಗಿದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ

ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…

2 hours ago

ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |

ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…

5 hours ago

ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ

ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…

18 hours ago

ಮುಳಿಯ ಕೃಷಿಗೋಷ್ಟಿ | ಕೃಷಿಕರೇ ಕೃಷಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವುದು ಹೇಗೆ..?

ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ  ಬಗ್ಗೆ ಪುತ್ತೂರಿನ…

18 hours ago

ಈ ರಾಶಿಯವರಿಗೆ ಒಂಟಿಯಾಗಿರುವುದೇ ಇಷ್ಟ, ಫ್ರೆಂಡ್ಸೂ ಬೇಡ, ಫ್ಯಾಮಿಲಿಯವ್ರೂ ಬೇಡ…!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago