ಪುತ್ತೂರು: ಇನ್ನೊಬ್ಬರ ಚಿಂತನೆಯನ್ನು ಒಟ್ಟುಗೂಡಿಸಿಕೊಂಡು ಮಾಡುವಂತಹ ಕಾರ್ಯಕ್ರಮವೇ ಬಾನುಲಿ ಕಾರ್ಯಕ್ರಮ. ಸಮುದಾಯ ಬಾನುಲಿ ಕೇಂದ್ರಕ್ಕೆ ಜನರ ಸಹಕಾರ, ಮಾರ್ಗದರ್ಶನ ಅವಶ್ಯಕವಾಗಿದೆ. ಕೇಳುಗರ ಅಭಿಪ್ರಾಯ, ಅಭಿರುಚಿಗೆ ತಕ್ಕಂತೆ ಇದು ಕಾರ್ಯಕ್ರಮ ನೀಡುತ್ತಾ ಬರುತ್ತಿದೆ. ಆ ನಿಟ್ಟಿನಲ್ಲಿ ದೇಶದ ಪ್ರಗತಿಗೆ ಇದು ಕೈ ಜೋಡಿಸುತ್ತಿದೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ. ಕೃಷ್ಣಭಟ್ ಹೇಳಿದರು.
ಅವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಸಮುದಾಯ ಬಾನುಲಿ ಕೇಂದ್ರ ಹಾಗೂ ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ “ಬಾನುಲಿ ಕಾರ್ಯಕ್ರಮಗಳು” ಎಂಬ ಮಾಹಿತಿ ಕಾರ್ಯಾಗಾರವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು. ಸಮುದಾಯ ಬಾನುಲಿ ಕೇಂದ್ರವು ಆ ವ್ಯಾಪ್ತಿಯ ಜನರ ಸಮುದಾಯಕ್ಕೆ ಪ್ರೇರಣೆಯಾಗುವ ರೀತಿಯಲ್ಲಿ ಕಾರ್ಯಕ್ರಮಗಳನ್ನು ನೀಡುತ್ತಾ ಬರುತ್ತಿದೆ. ಆದರೆ ಶ್ರೋತೃಗಳ ಸಂಖ್ಯೆ ಕ್ಷೀಣಿಸುತ್ತಿರುವ ಈ ಕಾಲಘಟ್ಟದಲ್ಲಿ ಇನ್ನೂ ಅಗಾಧವಾದ ರೀತಿಯಲ್ಲಿ ಇದು ಪರಿಣಾಮ ಬೀರಬೇಕಾಗಿದೆ. ಜನರು ಇಂತಹ ಕಾರ್ಯಕ್ರಮಕ್ಕೆ ಪ್ರತಿಕ್ರಿಯಿಸಿದಾಗಲೇ ಅದು ಸಾಧ್ಯವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಮಾನವ ಸಂಪನ್ಮೂಲಗಳನ್ನು ಉಪಯೋಗಿಸಿಕೊಂಡು ಆರ್ಥಿಕ, ಸಾಮಾಜಿಕ, ವೈಜ್ಞಾನಿಕ ವಿಚಾರಗಳನ್ನೊಳಗೊಂಡಂತೆ ಬಾನುಲಿಕೇಂದ್ರಗಳು ಕಾರ್ಯಕ್ರಮ ನೀಡುತ್ತಿದೆ. ಅವಕಾಶಗಳು ಕದ ತಟ್ಟಿದಾಗ ಅದನ್ನು ಉಪಯೋಗಿಸಿಕೊಂಡರೆ ಅದು ಸಾಧನೆಯಾಗಿ ಪರಿವರ್ತನೆಯಾಗುತ್ತದೆ. ಬಾನುಲಿ ಕೇಂದ್ರವು ಜನರ ಪ್ರತಿಭೆಗಳನ್ನು ಬಾಹ್ಯಲೋಕಕ್ಕೆ ತೆರೆದಿಟ್ಟು ಪ್ರಗತಿಗಣುಗುಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ “ರೇಡಿಯೋದ ವಿವಿಧ ಸಾಧ್ಯತೆಗಳು” ಎಂಬ ವಿಷಯದ ಕುರಿತು ಮಣಿಪಾಲ ಸಮುದಾಯ ಬಾನುಲಿ ಕೇಂದ್ರದ ಸಂಯೋಜಕ ಶ್ಯಾಮ್ ಭಟ್, ಮತ್ತು “ಬಾನುಲಿ ಕೇಂದ್ರದಲ್ಲಿ ಕಾರ್ಯಕ್ರಮ ವೈವಿಧ್ಯ” ಎಂಬ ವಿಷಯದ ಕುರಿತು ರೇಡಿಯೋ ಪಾಂಚಜನ್ಯದ ಕಾರ್ಯಕ್ರಮ ಸಂಯೋಜಕ ಡಾ.ಎಚ್.ಜಿ. ಶ್ರೀಧರ್ ಮಾಹಿತಿ ನೀಡಿದರು.
ವೇದಿಕೆಯಲ್ಲಿ ರೇಡಿಯೋ ಪಾಂಚಜನ್ಯದ ಅಧ್ಯಕ್ಷ ಪ್ರೇಮಾನಂದ, ಕಾರ್ಯದರ್ಶಿ ವಿಜಯಕೃಷ್ಣ ದರ್ಬೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಪವಿತ್ರಾ ಪ್ರಾರ್ಥಿಸಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷ ಅಧಿಕಾರಿ ವೆಂಕಟೇಶ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಪತ್ರಿಕೋದ್ಯಮ ವಿಭಾಗದ ಸಂಯೋಜಕ ರಾಕೇಶ್ ಕುಮಾರ್ ಕಮ್ಮಜೆ ವಂದಿಸಿದರು. ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಪ್ರಜ್ಞಾ ಬಾರ್ಯ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್‌ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…