ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರಾಯೋಜಿತ ರೇಡಿಯೋ ಪಾಂಚಜನ್ಯ 90.8 ಸಮುದಾಯ ಬಾನುಲಿ ಕೇಂದ್ರದ ವತಿಯಿಂದ ಹೆಚ್.ಡಿ. ಕೋಟೆಯ ಸರಗೂರಿನ ಜನಧ್ವನಿ ಸಮುದಾಯ ಬಾನುಲಿ ಕೇಂದ್ರಕ್ಕೆ ಅಕ್ಟೋಬರ್ 19ರಂದು ಅಧ್ಯಯನ ಪ್ರವಾಸ ಕೈಗೊಳ್ಳಲಾಯಿತು.
ಅಧ್ಯಯನ ಸಂದರ್ಭದಲ್ಲಿ ಜನಧ್ವನಿ ಬಾನುಲಿ ಕೇಂದ್ರದಲ್ಲಿನ ಕಾರ್ಯಕ್ರಮ ರೂಪುರೇಷೆಗಳ ಬಗೆಗೆ ಚರ್ಚೆ ನಡೆಸಲಾಯಿತು. ಸಮುದಾಯದ ಮಂದಿಯನ್ನು ರೇಡಿಯೋದೆಡೆಗೆ ಕರೆತರುವಲ್ಲಿನ ಆರಂಭಿಕ ದಿನಗಳ ಸವಾಲುಗಳು, ಮಾಧ್ಯಮ ಲೋಕಕ್ಕೆ ತೆರೆದುಕೊಳ್ಳದಿರುವವರನ್ನು ಬಾನುಲಿಯಲ್ಲಿ ತೊಡಗಿಸಿಕೊಳ್ಳುವ ಸಂದರ್ಭದಲ್ಲಿನ ಪ್ರಾಯೋಗಿಕ ಸಮಸ್ಯೆಗಳ ಬಗೆಗೆ ವಿಶ್ಲೇಷಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜನಧ್ವನಿ ಸಮುದಾಯ ಬಾನುಲಿ ಕೇಂದ್ರದ ಕಾರ್ಯಕ್ರಮ ಸಹಸಂಯೋಜಕ ಶಿವಕುಮಾರ್ ಸಮುದಾಯ ಬಾನುಲಿ ಎನ್ನುವುದು ಸಮಾಜದ ಅಭಿವೃದ್ಧಿಗೆ ಪೂರಕವಾದದ್ದು. ಜನರ ಒಳಗೊಳ್ಳುವಿಕೆ ಇಲ್ಲಿ ಬಹಳ ಮುಖ್ಯ. ಬಾನುಲಿ ಕೇಂದ್ರದ ಆರಂಭಿಕ ದಿನಗಳಲ್ಲಿ ಕಾರ್ಯಕ್ರಮ ರೂಪಿಸುವಿಕೆ ಬಹುದೊಡ್ಡ ಸವಾಲಾಗಿ ಭಾಸವಾಗುತ್ತದೆ. ಆದರೆ ಕ್ರಮೇಣ ಎಲ್ಲವೂ ಸುಲಭಸಾಧ್ಯವಾಗುತ್ತದೆ ಎಂದು ನುಡಿದರು.
ಅಧ್ಯಯನ ಪ್ರವಾಸದಲ್ಲಿ ರೇಡಿಯೋ ಪಾಂಚಜನ್ಯದ ಆಡಳಿತ ಮಂಡಳಿ ಕಾರ್ಯದರ್ಶಿ ವಿಜಯ ಕೃಷ್ಣ, ಕೋಶಾಧಿಕಾರಿ ಪ್ರಕಾಶ್ ಶೆಣೈ, ಸದಸ್ಯ ನಾ.ಕಾರಂತ ಪೆರಾಜೆ, ಕಾರ್ಯಕ್ರಮ ಸಂಯೋಜಕ ಡಾ.ಶ್ರೀಧರ ಎಚ್.ಜಿ, ನಿಲಯ ಸಂಯೋಜಕಿ ಶಿಲ್ಪ, ನಿಯೋಜಿತ ಸಂಯೋಜಕಿ ತೇಜಸ್ವಿ, ತಾಂತ್ರಿಕ ಸಹಾಯಕ ಪ್ರಶಾಂತ್, ಕಲ್ಲಡ್ಕ ಶ್ರೀರಾಮ ಕಾಲೇಜಿನ ಪ್ರಾಚಾರ್ಯ ಕೃಷ್ಣಪ್ರಸಾದ್ ಕಲ್ಲಡ್ಕ, ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಸಂಯೋಜಕಿ ಡಾ.ವಿಜಯ ಸರಸ್ವತಿ, ಸ್ನಾತಕೋತ್ತರ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆ, ಉಪನ್ಯಾಸಕ ಭರತ್‍ರಾಜ್ ಕರ್ತಡ್ಕ, ಇಂಗ್ಲಿಷ್ ಉಪನ್ಯಾಸಕ ಗಣೇಶ್ ಪ್ರಸಾದ್, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ, ವಿವೇಕಾನಂದ ಕಾನೂನು ಕಾಲೇಜಿನ ಉಪನ್ಯಾಸಕಿ ಸಂಗೀತಾ, ವಿವೇಕಾನಂದ ಬಿ.ಎಡ್ ಕಾಲೇಜಿನ ಉಪನ್ಯಾಸಕಿ ಡಾ.ಶೋಭಿತಾ ಸತೀಶ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಸುಭಾಷ್ ಪಟ್ಟಾಜೆ, ವಿವೇಕಾನಂದ ವಿದ್ಯಾವರ್ಧಕ ಸಂಘದ ವಿಶೇಷಾಧಿಕಾರಿ ವೆಂಕಟೇಶ್, ವಿವೇಕಾನಂದ ಕಾಲೇಜಿನ ಎಂ.ಸಿ.ಜೆ ವಿಭಾಗದ ಪ್ರಾಯೋಗಿಕ ಯೂಟ್ಯೂಬ್ ವಾಹಿನಿ ವಿಕಸನ ಟಿವಿ ಹಾಗೂ ವಿವೇಕಾನಂದ ಮಲ್ಟಿಮೀಡಿಯಾ ಸ್ಟುಡಿಯೋದ ತಾಂತ್ರಿಕ ಸಹಾಯಕ ಸಂತೋಷ್‍ಕುಮಾರ್ ಉಪಸ್ಥಿತರಿದ್ದರು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…
ಕರ್ನಾಟಕದಲ್ಲಿ ಅಡಿಕೆಯು ಪ್ರಮುಖ ವಾಣಿಜ್ಯ ಬೆಳೆಯಾಗಿರುವುದು ಕೇಂದ್ರದ ಗಮನದಲ್ಲಿದೆ. ಈ ನಿಟ್ಟಿನಲ್ಲಿ ವಿದೇಶಗಳಿಂದ…
ಸಹಕಾರಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಅಂತರಾಷ್ಟ್ರೀಯ ಮಟ್ಟದ ಕ್ಯಾಂಪ್ಕೊ ಸಂಸ್ಥೆ "ಕಲ್ಪ" ಕೊಬ್ಬರಿ ಎಣ್ಣೆ…