ಬೆಂಗಳೂರು: ನರೇಂದ್ರ ಮೋದಿ ಸರಕಾರದ 2 ನೇ ಅವಧಿಯ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ಕೊಡುಗೆ ನೀಡಿದೆ. ಇದು 2 ನೇ ಅವಧಿಯ 1 ನೇ ಹೆಜ್ಜೆ.
ಎಲ್ಲಾ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಲು ಹಾಗೂ 1 ಲಕ್ಷ ರೂ.ವರೆಗೆ ಬಡ್ಡಿರಹಿತ ಅಲ್ಪಾವಧಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲಗಳನ್ನು ನೀಡಲು ಉದ್ದೇಶಿಸಲಾಗಿದೆ. ಇನ್ನು ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿಯಲ್ಲಿ ರೈತರಿಗೆ ವಾರ್ಷಿಕ 6,000 ರೂ. ನೀಡುವುದನ್ನು ಎಲ್ಲ ರೈತರಿಗೂ ವಿಸ್ತರಿಸಲಾಗಿದೆ. ಈ ಮೊದಲು ಕಿಸಾನ್ ಯೋಜನೆಯು 2 ಹೆಕ್ಟೇರ್‌ವರೆಗೆ ಭೂಮಿಯುಳ್ಳ ರೈತರಿಗೆ ಮಾತ್ರ ಅನ್ವಯವಾಗುತ್ತಿತ್ತು.ಇದರಿಂದ ದೇಶದ ಸುಮಾರು 15 ಕೋಟಿ ರೈತರಿಗೆ ಅನುಕೂಲವಾಗಲಿದ್ದು, ಒಟ್ಟು ಮೂರು ಕಂತುಗಳಲ್ಲಿ ವಾರ್ಷಿಕ 6,000 ರೂ ಸಹಾಯಧನ ನೀಡಲಾಗುವುದು ಎಂದು ಕೇಂದ್ರ ಸರಕಾರ ತಿಳಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಪೆನ್ಷನ್ ಯೋಜನಾ ಅಡಿ 18ರಿಂದ 40 ವರ್ಷದವರೆಗಿನ ನೋಂದಾಯಿತ ಸಣ್ಣ ಹಾಗೂ ಅತಿ ಸಣ್ಣ ರೈತರು 60 ವರ್ಷ ಕ್ರಮಿಸಿದ ಬಳಿಕ ಕನಿಷ್ಠ 3 ಸಾವಿರ ರೂ. ನಿಗದಿತ ಪಿಂಚಣಿ ಪಡೆದುಕೊಳ್ಳುವ ಯೋಜನೆ ಇದಾಗಿದೆ.
ಈ ಎರಡು ಯೋಜನೆಗಳಿಂದ 26.5 ಕೋಟಿ ರೈತರಿಗೆ ಅನುಕೂಲವಾಗಲಿದೆ ಹಾಗೂ 2 ಕೋಟಿ ಅಧಿಕ ರೈತರನ್ನು ಸೇರಿಸಿಕೊಂಡು ಒಟ್ಟು 14.5 ಕೋಟಿ ಫಲಾನುಭವಿಗಳಾಗುತ್ತಾರೆ ಎಂದು ಅಂದಾಜಿಸಲಾಗಿದೆ.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490