ಸುಳ್ಯ: ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸುಳ್ಯ ಘಟಕದ ಪದಾಧಿಕಾರಿಗಳು ರಾಜ್ಯ ಕರ್ಯದರ್ಶಿ ರವಿಕಿರಣ ಪುಣಚ ಅವರೊಂದಿಗೆ ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಆಗಿ ಜಿಲ್ಲೆಯ ರೈತರ 19 ಬೇಡಿಕೆಗಳ ಮನವಿ ಮಾಡಲಾಯಿತು. ಜನವರಿ ತಿಂಗಳ ಮಧ್ಯದಲ್ಲಿ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಬಗೆಹರಿಸಿಕೊಡುವ ಭರವಸೆ ನೀಡಿದ್ದಾರೆ.
ಸುಳ್ಯ ತಾಲೂಕಿನ ರೈತರು ತಮ್ಮ ಸಮಸ್ಯೆ ಅಹವಾಲುಗಳನ್ನು ತಿಳಿಸಲು ಆ ದಿನ ಅವಕಾಶವಿರುತ್ತದೆ .
ಸಾಲಮನ್ನಾ ಜನವರಿ 10 ಒಳಗೆ ಎಲ್ಲಾ ರೈತರ ಖಾತೆಗಳಿಗೆ ಜಮಾಮಾಡಬೇಕು ಇಲ್ಲವಾದಲ್ಲಿ ಸಹಕಾರಿ ಸಂಘಗಳ ಆಡಳಿತ ಮಂಡಳಿ ಚುನಾವಣಾ ಬಹಿಸ್ಕರಿಸುತ್ತೇವೆ ಎಂಬ ರೈತರ ಮನವಿಯನ್ನು ಮಾನ್ಯ ಜಿಲ್ಲಾಧಿಕಾರಿಯವರಿಗೆ ಹಾಗು ಸಹಕಾರಿ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಲಾಗಿದೆ . 15 ದಿನಗಳಲ್ಲಿ ಎಲ್ಲಾ ರೈತರಿಗೂ ಸಾಲ ಮನ್ನಾ ಹಣ ಜಮಾ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ ಎಂದು ರೈತ ಸಂಘದ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಸೆಪ್ಟೆಂಬರ್ 28–29ರಿಂದ ಹಲವು ಭಾಗಗಳಲ್ಲಿ ಮತ್ತೆ…
ತ್ರಿಪುರಾದಲ್ಲಿ ರಬ್ಬರ್ ಏಕಬೆಳೆ ತೋಟಗಳ ವಿಸ್ತರಣೆಯಿಂದ ಜೀವವೈವಿಧ್ಯ, ಮಣ್ಣು ಮತ್ತು ನೀರಿನ ಮೇಲೆ…
ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…
ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…
₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್ 18 ಪ್ರೊ ಖರೀದಿಗಾಗಿ ದೇಶದ ಹಲವು…