Advertisement

ರೈತರ ಸಾಲಮನ್ನಾ- ಬಾಕಿ ರೈತರಿಗೆ ಶೀಘ್ರ ಮಂಜೂರು : ಸಚಿವ ಕೋಟ ಶ್ರೀನಿವಾಸ ಪೂಜಾರಿ

Share

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರ ಸಾಲಮನ್ನಾ ಯೋಜನೆಯಲ್ಲಿ ತಾಂತ್ರಿಕ ದೋಷಗಳಿಂದಾಗಿ ಸಾಲಮನ್ನಾ ಮಂಜೂರಾಗದ ರೈತರಿಗೆ ಸೌಲಭ್ಯವನ್ನು ಶೀಘ್ರವೇ ಮಂಜೂರು ಮಾಡಲಾಗುವುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

Advertisement
Advertisement

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರೈತ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಈ ವಿಷಯ ತಿಳಿಸಿದರು. ಜಿಲ್ಲೆಯಲ್ಲಿ ಸುಮಾರು 6855 ರೈತರಿಗೆ ಸಾಲಮನ್ನಾ ಸೌಲಭ್ಯ ಅವರ ಬ್ಯಾಂಕ್ ಖಾತೆಯ ಸಮಸ್ಯೆಯಿಂದಾಗಿ ಸಾಲಮನ್ನಾ ಸೌಲಭ್ಯ ಸಿಗದೇ ಇರುವುದು   ಕಂಡು ಬಂದಿದೆ. ಈ ನಿಟ್ಟಿನಲ್ಲಿ ಮುಂದಿನ 15 ದಿನದೊಳಗೆ ಬೆಂಗಳೂರಿನಲ್ಲಿ ಈ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗುವುದು, ರೈತರಿಗೆ ಸಾಲ ಮನ್ನಾ ಮಂಜೂರು ಮಾಡಲಾಗುವುದು ಎಂದು ಹೇಳಿದರು.

Advertisement

ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಸಾಲಮನ್ನಾ ಯೋಜನೆಗೆ 3156 ಅರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ, ಇವರಿಗೆ 16.85 ಕೋಟಿ ಸಾಲ ಮನ್ನಾ ಆಗಲಿದ್ದು, ಈ ಪೈಕಿ 2841 ರೈತರಿಗೆ ಸುಮಾರು 14.35 ಕೋಟಿ ಮೊತ್ತ ಬಂದಿರುತ್ತದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಸಭೆಯಲ್ಲಿ ತಿಳಿಸಿದರು.

ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾತಾನಾಡಿ ರೈತರ ಸಾಲ ಸುಸ್ತಿದಾರರಾಗಿದ್ದರೆ ಅವರನ್ನು ಅವಮಾನಗೊಳಿಸುವ ಯಾವುದೇ ಕಾರ್ಯವನ್ನು ಬ್ಯಾಂಕ್‍ನವರು ಮಾಡಬಾರದು. ಬ್ಯಾಂಕ್‍ಗಳಿಗೆ ಕನ್ನಡ ಬಲ್ಲ ಅಧಿಕಾರಿಗಳನ್ನು ನೇಮಿಸಬೇಕು. ಹೊರರಾಜ್ಯದ  ಬ್ಯಾಂಕ್ ಅಧಿಕಾರಿಗಳು ಸ್ಥಳೀಯ ಭಾಷೆಯನ್ನು ಕಡ್ಡಾಯವಾಗಿ ಕಲಿಯುವಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

Advertisement

ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ನೆರವನ್ನು ಯಾವುದೇ ಸಮಸ್ಯೆಗಳಿಲ್ಲದೆ ಮಂಜೂರು ಮಾಡಬೇಕೆಂದು ಸಚಿವರು ಸೂಚಿಸಿದರು.

ಸಭೆಯಲ್ಲಿ ಶಾಸಕ ಡಿ. ವೇದವ್ಯಾಸ ಕಾಮತ್, ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ದ.ಕ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ದ.ಕ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೆಲ್ವಮಣಿ ಆರ್, ದ.ಕ ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

13 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

15 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

2 days ago