Advertisement
ಸುದ್ದಿಗಳು

ರೈತರ ಹಿತರಕ್ಷಣೆಗೆ ಸರಕಾರ ಬದ್ಧವಾಗಿದೆ – ಬಿ.ಎಸ್.ಯಡಿಯೂರಪ್ಪ ಭರವಸೆ

Share

ಬೆಂಗಳೂರು: ರೈತರ ಹಿತರಕ್ಷಣೆಗೆ ಸರಕಾರ ಯಾವತ್ತೂ ಬದ್ಧವಾಗಿದೆ. ನೆರೆಯಿಂದ ಹಾನಿಗೀಡಾದ ರೈತರಿಗೆ ರಾಜ್ಯ ಸರಕಾರ ಸಾಕಷ್ಟು ಪರಿಹಾರವನ್ನು ನೀಡಿದೆ. ಇನ್ನಷ್ಟು ಯೋಜನೆಗಳನ್ನು ಶೀಘ್ರದಲ್ಲಿಯೇ ಘೋಷಣೆ ಮಾಡಲಾಗುವುದು. ರಾಜ್ಯದ  ಎಲ್ಲಾ ರೈತರ ಹಿತ ಕಾಪಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.

Advertisement
Advertisement

ಅವರು ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆಯ ರೈತ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ , ಬಸವರಾಜು ಹಾಗು ಸಾಮಾಜಿಕ ಹೋರಾಟಗಾರ ಟಿ.ಜೆ.ಅಬ್ರಾಹಂ ನೇತೃತ್ವದ ನಿಯೋಗ ಮುಖ್ಯಮಂತ್ರಿ ಬಿ.ಎಸ್‍ ಯಡಿಯೂರಪ್ಪ ಅವರನ್ನು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ‌ ಮಾಡಿದ ಸಂದರ್ಭ ಮಾತುಕತೆ ನಡೆಸಿದರು. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಮೈಕ್ರೋ ಪೈನಾನ್ಸ್ ಕಂಪನಿಗಳು ಗಂಜಿ ಕೇಂದ್ರಗಳಿಗೆ ಹೋಗಿ ಹಣ ವಸೂಲಿಗೆ ಮುಂದಾಗಿರುವ ಕುರಿತು ಕೋಡಿಹಳ್ಳಿ ಚಂದ್ರಶೇಖರ್ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಅವುಗಳ ವಿರುದ್ದ ಕ್ರಮ‌ಕೈಗೊಳ್ಳಲು ಮನವಿ ಮಾಡಿದರು.

ತಕ್ಷಣವೇ ರಾಯಚೂರು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಮುಖ್ಯಮಂತ್ರಿ ಗಳು ಕೂಡಲೇ ಫೈನಾನ್ಸ್ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಎಲ್ಲಾ ಜಿಲ್ಲೆಗಳಲ್ಲೂ ಈ ಬಗ್ಗೆ ಗಮನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

ಬರ ಪರಿಹಾರ ಮೊತ್ತ ಬಿಡುಗಡೆ, ಕೃಷ್ಣಾ ನದಿ ನಿರ್ವಹಣ ಪ್ರಾಧಿಕಾರ ರಚನೆ, ನೀರಾ ಮಂಡಳಿ ಸ್ಥಾಪನೆ, ಯಶಸ್ವಿನಿ ಯೋಜನೆಜಾರಿ ಸೇರಿದಂತೆ ರೈತರ ನಿಯೋಗ ಸಲ್ಲಿಸಿದ ಬೇಡಿಕೆಗಳ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ರೈತರ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮನವಿ ಸಲ್ಲಿಸಿತು. ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲೆಯ ರೈತ ಮುಖಂಡರೂ ಭಾಗಿಯಾಗಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

11 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago