ಸುಳ್ಯ: ಸುಳ್ಯ ತಾಲೂಕು ರೈತ ಸಂಘದ ಸದಸ್ಯರು ಶಾಸಕರಾದ ಎಸ್ ಅಂಗಾರ ಇವರನ್ನು ತಾಲೂಕು ಕಚೇರಿಯಲ್ಲಿ ಭೇಟಿ ಮಾಡಿ ಕೊಳೆರೋಗದ ಹಣ ಮಂಜೂರುಗೊಂಡಿದ್ದರೂ ರೈತರ ಖಾತೆಗೆ ಹಣ ಜಮೆ ಆಗದಿರುವ ವಿಷಯವನ್ನು ಪ್ರಸ್ತಾಪಿಸಿದ್ದರು . ಇದಕ್ಕೆ ಮಾನ್ಯ ಶಾಸಕರು ತೋಟಗಾರಿಕೆ ಇಲಾಖಾ ಅಧಿಕಾರಿಗಳು ಮತ್ತು ತಹಶೀಲ್ಧಾರ್ ಅವರಿಗೆ ದೂರವಾಣಿ ಕರೆ ಮಾಡಿ ಕೂಡಲೆ ಯಾರಿಗೆಲ್ಲ ಹಣ ಜಮೆ ಅಗಲಿಲ್ಲವೋ ಮತ್ತು ದಾಖಲೆಗಳ ತೊಂದರೆ ಇದ್ದಲ್ಲಿ ಕೂಡಲೆ ಸಂಬಂದಪಟ್ಟ ಅಧಿಕಾರಿಗಳು ಸರಿಪಡಿಸಿ ವರದಿ ನೀಡುವಂತೆ ತಿಳಿಸಿರುತ್ತಾರೆ . ಈ ಸಂದರ್ಭದಲ್ಲಿ ರೈತ ಸಂಘದ ಸದಸ್ಯರಾದ ಧರ್ಮಪಾಲ ಗೌಡ ಕೊಯಿಂಗಾಜೆ , ಮನ್ಮಥ ಗೌಡ ಕುಡೆಕಲ್ಲು ಉಪಸ್ಥಿತರಿದ್ದರು.
ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…