ಸುಳ್ಯ: ರೈತ ಸಂಘ ಹಾಗು ಹಸಿರು ಸೇನೆ ಜಿಲ್ಲಾ ಸಮಿತಿ ಸಭೆ ಬಂಟ್ವಾಳದ ನಿರೀಕ್ಷಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ನೂತನ ಜಿಲ್ಲಾ ಸಮಿತಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾಧ್ಯಕ್ಷರಾಗಿ ಓಸ್ವಾಲ್ಡ್ ಪ್ರಕಾಶ್ ಪೆರ್ನಾಂಡಿಸ್, ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಪೆರಾಬೆ, ಉಪಾಧ್ಯಕ್ಷರುಗಳಾಗಿ ಶ್ರೀನಿವಾಸ್ ಗೌಡ ನಿಡಿಂಜಿ, ದಿವಾಕರ ಪೈ ಮಜಿಗುಂಡಿ, ಅಲ್ವೀನ್ ಮಿನೆಜಸ್ ರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಎಂ.ರಾಮು ಚೆನ್ನಪಟ್ಟಣ, ಜಿ.ಟಿ.ರಾಮಸ್ವಾಮಿ, ಲೋಕೆಶ್ ರಾಜೇ ಅರಸ್, ಮೈಸೂರು ಜಿಲ್ಲಾಧ್ಯಕ್ಷ ಹೊಸುರ್ ಕುಮಾರ್, ಹಾಸನ ಜಿಲ್ಲಾಧ್ಯಕ್ಷ ರಘು ಹಿರಿಸಾವೆ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾ, ತಾಲೂಕು, ವಲಯ ಹಾಗೂ ಗ್ರಾಮ ಘಟಕಗಳ ಪದಾಧಿಕಾರಿಗಳು, ಪ್ರಮುಖ ಕಾರ್ಯಕರ್ತರು ಭಾಗವಹಿಸಿದ್ದರು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ತಿಳಿಸಿದ್ದಾರೆ.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel