ಸುಳ್ಯ: ಮಿತ್ತಡ್ಕ ರೋಟರಿ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿ ಪದವಿಪೂರ್ವ ಕಾಲೇಜು ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಅಗ್ನಿ ಶಮನ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳದ ಕೆ.ಎಂ ಅಬ್ರಾಹಂ ಅಗ್ನಿ ಅನಾಹುತದ ಸಂದರ್ಭದಲ್ಲಿ ಅಗ್ನಿ ಶಮನಕ್ಕೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವಿವರಿಸಿದರು. ಅಗ್ನಿಶಾಮಕ ದಳದ ಠಾಣಾಧಿಕಾರಿ ಕೆ.ವಿಶ್ವನಾಥ ಪೂಜಾರಿ, ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ. ಪುರುಷೊತ್ತಮ ಕೆ.ಜಿ, ರೋಟರಿ ವಿದ್ಯಾಸಂಸ್ಥೆಗಳ ಸಂಚಾಲಕ ಜೀತೇಂದ್ರ ಎನ್.ಎ, ಪ್ರಭಾಕರನ್ ನಾಯರ್, ಕಾಲೇಜಿನ ಪ್ರಾಂಶುಪಾಲೆ ಶೋಭಾ ಬೊಮ್ಮೆಟ್ಟಿ, ರೋಟರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಕೆ.ವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜು ವಿದ್ಯಾರ್ಥಿ ನಾಯಕ ಚಿಂತನ್ ಸ್ವಾಗತಿಸಿ, ಇಂಟರಾಕ್ಟ್ ಕ್ಲಬ್ ನಾಯಕಿ ಶರಣ್ಯ ಬೇರಿಕೆ ವಂದಿಸಿದರು. ಚಿತ್ಕಲ ಭಾರಾಧ್ವಜ್ ಪ್ರಾರ್ಥಿಸಿದರು, ಶಮಾ ಮಡ್ತಿಲ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ನಂತರ ಕೆ.ವಿಶ್ವನಾಥ ಪೂಜಾರಿ ನೇತೃತ್ವದಲ್ಲಿ ಅಗ್ನಿ ಶಮನದ ಪ್ರಾತ್ಯಕ್ಷಿತೆ ನಡೆಸಲಾಯಿತು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…