ಸುಳ್ಯ: ರೋಟರಿ ಸುಳ್ಯದ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಸಭಾಧ್ಯಕ್ಷತೆಯನ್ನು ರೋಟರಿ ಸುಳ್ಯದ ಅಧ್ಯಕ್ಷರಾದ ರೊ. ಡಾ. ಪುರುಷೋತ್ತಮ ವಹಿಸಿ ಸರ್ವರನ್ನು ಸ್ವಾಗತಿಸಿದರು.
ಮುಖ್ಯ ಅತಿಥಿಯಾಗಿ ನಿವೃತ್ತ ಪ್ರಾಂಶುಪಾಲರಾದ ರೊ.ಉಮ್ಮರ್ ಶಿಕ್ಷಕರ ದಿನಾಚರಣೆಯ ಮಹತ್ವದ ಬಗ್ಗೆ ವಿವರಿಸಿದ ಅವರು ಶಿಕ್ಷಕರ ದಿನಾಚರಣೆಗೆ ಕಾರಣಿಕರ್ತರಾದ ಮಾಜಿ ರಾಷ್ಟ್ರಪತಿ ಡಾ.ರಾಧಾಕೃಷ್ಣರವರ ಬಗ್ಗೆ ಮಾತನಾಡಿ, ಅವರು ಅಸಾಧಾರಣ ವ್ಯಕ್ತಿತ್ವವನ್ನು ಹೊಂದಿದ್ದರು. ದೇಶದ ವಿವಿಧ ರಾಜ್ಯಗಳಲ್ಲಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ ಇವರು oxfordನಲ್ಲೂ ಸೇವೆ ಸಲ್ಲಿಸಿರುತ್ತಾರೆ. ಜಗತ್ತಿನಲ್ಲಿ ಬೇರೆ ಬೇರೆ ನಾಗರಿಕತೆಯನ್ನು ಕಾಣಬಹುದಾಗಿದ್ದರು ಎಲ್ಲಾ ನಾಗರಿಕತೆಗಳಲ್ಲಿ ಶಿಕ್ಷಕರಿಗೆ ವಿಶೇಷ ಗೌರವವನ್ನು ಕೊಟ್ಟದ್ದು ನಾವು ಕಾಣಬಹುದಾಗಿದೆ. ಡಾ.ರಾದಕೃಷ್ಣರ ವ್ಯಕ್ತಿತ್ವಕ್ಕೆ ಹಾಗೂ ಅವರ ಪ್ರತಿಭೆಗೆ ಭಾರತ ರತ್ನ ಗೌರವ ಸಿಕ್ಕಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ ಎಂದರೆ ತಪ್ಪಾಗಲಾರದು ಎಂದು ಹೇಳಿದರು.
ರೊ.ಡಾ. ಕೇಶವ ಪಿ.ಕೆ, ರೊ.ದಯಾನಂದ ಆಳ್ವಾ, ರೊ.ಡಾ. ಗುರುರಾಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂಧರ್ಭದಲ್ಲಿ ಶಿಕ್ಷಕರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ರೊ. ಸನತ್ ವಂದಿಸಿದರು. ರೊ. ಕಲಾಮ್ ಕಾರ್ಯಕ್ರಮ ನಿರೂಪಿಸಿದರು.
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…