ಸುಳ್ಯ:1971ರಲ್ಲಿ ಪ್ರಾರಂಭಗೊಂಡ ಸುಳ್ಯ ರೋಟರಿ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ 2020-21ನೇ ಸಾಲಿನಲ್ಲಿ ಅದ್ದೂರಿಯಾಗಿ ಆಚರಿಸಲಾಗುವುದು. ಸುವರ್ಣ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ವತಿಯಿಂದ 50 ಲಕ್ಷ ರೂ ವೆಚ್ಚದಲ್ಲಿ ವಿವಿಧ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ.
ನ.11ರಂದು ಈ ಯೋಜನೆಗಳಿಗೆ ಚಾಲನೆ ನೀಡಲಾಗುವುದು ಎಂದು ರೋಟರಿ ಸುವರ್ಣ ಮಹೋತ್ಸವ ಆಚರಣಾ ಸಮಿತಿಯ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಿತ್ತಡ್ಕ ರೋಟರಿ ಶಾಲಾ ವಠಾರದಲ್ಲಿ ಯೋಜನೆಗಳಿಗೆ ಚಾಲನೆ ಮತ್ತು ಭೂಮಿ ಪೂಜೆ ನಡೆಯಲಿದೆ. ರೋಟರಿ ಸದಸ್ಯರ ಸಹಕಾರದಲ್ಲಿ ಮಿತ್ತಡ್ಕ ರೋಟರಿ ಶಾಲೆಯಲ್ಲಿ ರಂಗಮಂದಿರ, ಸ್ವಾಗತ ಕಮಾನು, ಸುಳ್ಯ ರಥಬೀದಿಯ ರೋಟರಿ ಶಾಲೆಯಲ್ಲಿ ಹವಾನಿಯಂತ್ರಿತ ರೋಟರಿ ಸಭಾಭವನ, ಶಾಲೆಗೆ ಮೇಲ್ಮುಚ್ಚಿಗೆ, ಬಾಳುಗೋಡಿನ ಬೆಟ್ಟುಮಕ್ಕಿ ಎಂಬಲ್ಲಿ ರಂಗ ಮಂದಿರ, ಶೌಚಾಲಯ ನಿರ್ಮಾಣ ಮತ್ತಿತರ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ರೋಟರಿ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯು ಯೋಜನೆಗೆ ಚಾಲನೆ ನೀಡುವರು. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ಎಂ.ರಂಗನಾಥ ಭಟ್, ಝೋನ್ 5ರ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ.ಕೆ, ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಅವರು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಎಂ.ಮೀನಾಕ್ಷಿ ಗೌಡ, ಪ್ರಭಾಕರನ್ ನಾಯರ್, ಗುರುರಾಜ ವೈಲಾಯ, ಲತಾ ಮಧುಸೂದನ್, ದಯಾನಂದ ಆಳ್ವ, ಗಣೇಶ್ ಶರ್ಮ ಉಪಸ್ಥಿತರಿದ್ದರು.
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…
ಕೇಂದ್ರ ಸರ್ಕಾರ 2015ರಲ್ಲಿ ದೇಶೀಯ ಹಾಗೂ ಆಮದು ಯೂರಿಯಾಗೆ ಬೇವು ಲೇಪನ ಕಡ್ಡಾಯಗೊಳಿಸುವ…
ಮನೆತನವನ್ನು ಕಟ್ಟುವುದು ಕೇವಲ ಆರ್ಥಿಕ ಸೌಲಭ್ಯಗಳನ್ನು ಒದಗಿಸುವುದಲ್ಲ; ಕುಟುಂಬದ ಸದಸ್ಯರ ನಡುವೆ ಪ್ರೀತಿ,…
ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…
ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…
ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…