ಮಡಿಕೇರಿ: ವಿರಾಜಪೇಟೆ ತಹಶೀಲ್ದಾರ್ ಪುರಂದರ ಅವರು ತಮ್ಮ ಕಚೇರಿಯಲ್ಲೇ ಶುಕ್ರವಾರ ಲಂಚ ಸ್ವೀಕರಿಸುವಾಗ ಏಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ವಿರಾಜಪೇಟೆ ತಾಲೂಕು ತೂಚಮಕೇರಿಯ ನಿವಾಸಿ ಪಿ ಎಂ ನರೇಂದ್ರ ಎಂಬುವವರು ತಮ್ಮ ಜಮೀನನ್ನು ಭೂ ಪರಿವರ್ತನೆ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಆದರೆ ಕೆಲಸ ಮಾಡಿಕೊಡಲು ಸತಾಯಿಸುತಿದ್ದ ತಹಶೀಲ್ದಾರ್ ಅವರು ಸಿಬ್ಬಂದಿ ಜಾಗೃತ್ ಮೂಲಕ 15 ಸಾವಿರ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದರು. ಕೊನೆಗೆ 9 ಸಾವಿರ ರೂಪಾಯಿ ಕೊಡಲು ನರೇಂದ್ರ ಸಮ್ಮತಿಸಿದ್ದರು. ಇಂದು ಈ ಲಂಚದ ಮೊದಲ ಕಂತಾದ 2000 ರೂಪಾಯಿಗಳನ್ನು ತಮ್ಮ ಕಚೇರಿಯಲ್ಲೇ ಸ್ವೀಕರಿಸುತಿದ್ದಾಗ ಏಸಿಬಿ ಡಿವೈಎಸ್‌ಪಿ ಪೂರ್ಣಚಂದ್ರ ಹಾಗೂ ಇನ್ಸ್‌ಪೆಕ್ಟರ್ ಮಂಜುನಾಥ್ ಧಾಳಿ ನಡೆಸಿ ಬಂಧಿಸಿದ್ದಾರೆ. ಸಿಬ್ಬಂದಿ ಜಾಗೃತ್ ಎಂಬಾತನನ್ನೂ ಬಂಧಿಸಲಾಗಿದ್ದು ಮೊಕದ್ದಮೆ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಯುತ್ತಿದೆ.
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…
ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…
ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…