ಸುಬ್ರಹ್ಮಣ್ಯ: ಕುಕ್ಕೆಯಲ್ಲಿ ಸುಬ್ರಹ್ಮಣ್ಯದಲ್ಲಿ ಲಕ್ಷದೀಪೋತ್ಸವಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ದೇವಸ್ಥಾನದ ಸೇರಿದಂತೆ ರಥಬೀದಿ ಹಾಗೂ ಕಾಶಿಕಟ್ಟೆಯವರೆಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ. ಇದೇ ವೇಳೆ ಕಾಶಿಕಟ್ಟೆಯಲ್ಲಿ ಗುರ್ಜಿ ಪೂಜೆಗೆ ಸಿದ್ಧತೆ ನಡೆಯುತ್ತಿದೆ.
ದೇವರ ಲಕ್ಷದೀಪೋತ್ಸವದ ಸಂದರ್ಭ ಭಕ್ತಾದಿಗಳ ಸಹಕಾರದಿಂದ ಲಕ್ಷ ಹಣತೆಗಳನ್ನು ಹಚ್ಚಲಾಗುತ್ತದೆ. ದೇವಳದ ಹಾಗೂ ಸಾರ್ವಜನಿಕ ಭಕ್ತರ ಸಹಕಾರದಿಂದ ದೇವಳದ ಗೋಪುರದಿಂದ ಕಾಶಿಕಟ್ಟೆವರೆಗೆ ಲಕ್ಷ ಹಣತೆಗಳು ಬೆಳಗಲಿದೆ.ದೇವಳದ ಹೊರಾಂಗಣದಲ್ಲಿ ಶ್ರೀ ದೇವರ ಶೇಷವಾಹನಯುಕ್ತ ಬಂಡಿ ಉತ್ಸವ ಮತ್ತು ಪಾಲಕಿ ಉತ್ಸವ ನಡೆಯಲಿದೆ.
ಗುರ್ಜಿ ಪೂಜೆ:
ಲಕ್ಷದೀಪೋತ್ಸವದಂದು ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನದಲ್ಲಿ ಶ್ರೀ ದೇವರ ಗುರ್ಜಿ ಪೂಜೋತ್ಸವ ನೆರವೇರಲಿದೆ. ಚಂದ್ರಮಂಡಲ ರಥದಲ್ಲಿ ಕಾಶಿಕಟ್ಟೆಗೆ ಆಗಮಿಸಿದ ಶ್ರೀ ದೇವರಿಗೆ ಗುರ್ಜಿಯಲ್ಲಿ ಪೂಜೆ ನೆರವೇರುತ್ತದೆ. ಈ ಮೊದಲು ಕಾಶಿಕಟ್ಟೆ ಮಹಾಗಣಪತಿಗೆ ದೀಪಾರಾಧನೆಯುಕ್ತ ರಂಗಪೂಜೆ ನಡೆಯಲಿದೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…