ಮಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘನೆಯ ಕಾರಣದಿಂದ ಶನಿವಾರ 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದು ದಕ ಜಿಲ್ಲಾ ಪೊಲೀಸರು 73 ವಾಹನಗಳನ್ನು ಮುಟ್ಟುಗೋಲು ಹಾಕಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಾ.ಹರ್ಷ, ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡಿದ ಕಾರಣದಿಂದ 211 ವಾಹನಗಳನ್ನು ಮುಟ್ಟುಗೋಲು ಹಾಕಲಾಗಿದೆ. ಇದರಿಂದಾಗಿ ನಾನು ಸಂತೋಷವಾಗಿಲ್ಲ. ನೀವು ಸಂತೋಷವೇ ಎಂದು ಪ್ರಶ್ನಿಸಿದ್ದಾರೆ. ಎಲ್ಲಾ ಸೂಚನೆಗಳನ್ನು ಅನುಸರಿಸಿ. ಕೊರೊನಾ ಸಾಂಕ್ರಾಮಿಕದಿಂದ ನಿಮ್ಮನ್ನು ಉಳಿಸಿ ಮತ್ತು ಇತರರಿಗೆ ಅಪಾಯವನ್ನುಂಟುಮಾಡಬೇಡಿ. ನಿಯಮಗಳನ್ನು ಜಾರಿಗೊಳಿಸಲು ನಾವು ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ. ಮನೆಯಲ್ಲಿಯೇ ಇರಿ ಎಂದು ಹೇಳಿದ್ದಾರೆ.
ಲಾಕ್‌ಡೌನ್ ಆದೇಶ ಉಲ್ಲಂಘಿಸಿ ನಗರದಲ್ಲಿ ಶನಿವಾರ ರಸ್ತೆಗಳಿದ ಸುಮಾರು 211 ವಾಹನಗಳನ್ನು ಮಂಗಳೂರು ನಗರ ಪೊಲೀಸರು ಮುಟ್ಟುಗೋಲು ಹಾಕಿದ್ದಾರೆ. ಹಾಗೆಯೇ ದ.ಕ.ಜಿಲ್ಲಾ ಪೊಲೀಸರು 73 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್‌ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…