ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗಿನ ವಿಡಿಯೋ ಮೂಲಕ ಸಭೆ ನಡೆಸಿದರು. ಈ ಸಂದರ್ಭ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಅಭಿಪ್ರಾಯ, ಸಲಹೆ ಹಾಗೂ ಸದ್ಯದ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದರು. ಈ ಸಂದರ್ಭ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ಡೌನ್ ಮುಂದುವರಿಕೆಯ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜ್ಯಗಳ ಅಭಿಪ್ರಾಯ ಸಂಗ್ರಹಿಸಿರುವ ಮೋದಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.
ಸಭೆಯಲ್ಲಿ ಬಹುತೇಕ ಮುಖ್ಯಮಂತ್ರಿಗಳು ಕೊರೊನಾ ಸೋಂಕು ಹರಡುವಿಕೆ ಇನ್ನೂ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಲಾಕ್ಡೌನ್ ಮುಂದುವರೆಸುವುದೇ ಸೂಕ್ತ ಎಂಬ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಮೇ 3ರ ಬಳಿಕ ಮತ್ತೆ 2 ವಾರ ಲಾಕ್ಡೌನ್ ವಿಸ್ತರಣೆ ಮಾಡುವ ಸಾಧ್ಯತೆಗಳು ಇವೆ.
ಪ್ರಧಾನಿಗಳ ಜೊತೆ ನಡೆದ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತನಾಡಿ, ಕೊರೊನಾ ನಿಯಂತ್ರಿಸಲು ದೇಶದಾದ್ಯಂತ ಜಾರಿಗೊಳಿಸಿರುವ ಲಾಕ್ಡೌನ್ ಮೇ.15ರ ವರೆಗೆ ಮುಂದುವರೆಸಬೇಕಾಗಬಹುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.