ಮಂಗಳೂರು: ರಾಜ್ಯದಲ್ಲಿ ಲಾಕ್ಡೌನ್ ಸಡಿಲಿಕೆ ಆದೇಶ ಇದ್ದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಡಿಲಿಕೆ ಮಾಡುವ ಬಗ್ಗೆ ಸಭೆ ನಡೆಸಿ ಜಿಲ್ಲೆಯ ಸ್ಥಿತಿಗತಿ ಗಮನಿಸಿದ ಬಳಿಕವೇ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಹಾಟ್ ಸ್ಫಾಟ್ ಅಥವಾ ರೆಡ್ ಝೋನ್ ವಲಯದಲ್ಲಿ ಇರುವುದರಿಂದ ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮುನ್ನ ವಸ್ತುಸ್ಥಿತಿ ತಿಳಿಯಬೇಕಿದೆ.ಇಲ್ಲಿ ಈಗಾಗಲೇ ಕಂಟೈನ್ಮೆಂಟ್ ವಲಯ ಮಾಡಲಾಗಿದೆ ಇದೆಲ್ಲಾ ಗಮನಿಸಿದ ಬಳಿಕವೇ ಕ್ರಮ ಕೈಗೊಳ್ಳಲಾಗುತ್ತದೆ , ಹೀಗಾಗಿ ಎ.23 ರಂದು ಸಂಸದರು, ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಾಗುವುದು. ಸಭೆ ನಡೆಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲಾಡಳಿತವು ಲಾಕ್ಡೌನ್ ಸಡಿಲಿಕೆ ನಿಯಮದ ಬಗ್ಗೆ ಅಧಿಕೃತ ಆದೇಶ ಹೊರಡಿಸದ ಹೊರತು ಲಾಕ್ಡೌನ್ ಉಲ್ಲಂಘನೆ ಮಾಡುವಂತಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…