ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸೋಮವಾರದಂದು ಬಂದ 75 ಮಂದಿಯ ಕೊರೊನಾ ವೈರಸ್ ಪರೀಕ್ಷಾ ವರದಿಯಲ್ಲಿ ಎಲ್ಲವೂ ನೆಗೆಟಿವ್ ಬಂದಿದೆ. ಲಾಕ್ಡೌನ್ ಸಡಿಲಿಕೆ ನಡುವೆಯೂ ಈ ವರದಿ ನೆಮ್ಮದಿ ತಂದಿದೆ.
ಸೋಮವಾರದಂದು ಒಟ್ಟು 49ಮಂದಿ ತಪಾಸಣೆಗೊಳಪಟ್ಟಿದ್ದಾರೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 28 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 330 ಮಂದಿಯ ವರದಿಗಳು ಬರಬೇಕಾಗಿದೆ. ಈವರೆಗೆ ಒಟ್ಟು 40,206 ಮಂದಿ ಸ್ಕ್ರ್ರೀನಿಂಗ್‌ಗೊಳಪಟ್ಟಿದ್ದಾರೆ. 33 ಮಂದಿ ಎನ್‌ಐಟಿಕೆ ಸುರತ್ಕಲ್‌ನಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಇಎಸ್‌ಐ ಹಾಸ್ಪಿಟಲ್‌ನಲ್ಲಿ 40 ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. ಇನ್ನು ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel