ಸುಳ್ಯ: ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಆಶ್ರಯದಲ್ಲಿ ಯಕ್ಷ ಸಂಭ್ರಮ ಮತ್ತು ವನಜ ರಂಗಮನೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ನಡೆಯಿತು.
ಕಲಾಪೋಷಕ ಹಾಗು ಮೂಡಬಿದಿರೆಯ ಧನಲಕ್ಷ್ಮಿ ಕ್ಯಾಶ್ಯೂ ಎಕ್ಸ್ ಪೋರ್ಟ್ ಇದರ ಅಧ್ಯಕ್ಷ ಕೆ.ಶ್ರೀಪತಿ ಭಟ್ ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ರಂಗಮನೆಯ ವತಿಯಿಂದ ನೀಡುವ ವನಜ ರಂಗಮನೆ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ಅವರಿಗೆ ನೀಡಿ ಗೌರವಿಸಲಾಯಿತು. ಹಿರಿಯ ಯಕ್ಷಗಾನ ಕಲಾವಿದ ಸುಜನಾ ಸುಳ್ಯ ಉಪಸ್ಥಿತರಿದ್ದರು.
ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದ ಅಧ್ಯಕ್ಷ ಜೀವನ್ ರಾಂ ಸುಳ್ಯ ಸ್ವಾಗತಿಸಿ, ನಿರ್ದೇಶಕ ಕೆ.ಕೃಷ್ಣಮೂರ್ತಿ ವಂದಿಸಿದರು. ಡಾ.ಸುಂದರ ಕೇನಾಜೆ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಾ ನಿಷಾದ ಯಕ್ಷಗಾನ ನಡೆಯಿತು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…