ಮತ ಎಣಿಕೆಯ ಕೇಂದ್ರದತ್ತ ತೆರಳಿದ ಸುಳ್ಯ ಬಿಜೆಪಿ ತಂಡ
ಸುಳ್ಯ: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆ ಮತ ಎಣಿಕೆ ಸುರತ್ಕಲ್ ಎನ್ಐಟಿಕೆ ಮತಎಣಿಕೆ ಕೇಂದ್ರದಲ್ಲಿ ಮೆ.23ರಂದು ನಡೆಯಲಿದೆ. ಮತ ಎಣಿಕೆ ಕಾರ್ಯದಲ್ಲಿ ಭಾಗವಹಿಸುವ ವಿವಿಧ ಪಕ್ಷಗಳ ಮತ ಎಣಿಕೆ ಏಜೆಂಟ್ ಗಳ ತಂಡ ಬುಧವಾರ ಮಂಗಳೂರಿಗೆ ತೆರಳಿದ್ದಾರೆ.
ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಒಬ್ಬ ಸಹಾಯಕ ಚುನಾವಣಾಧಿಕಾರಿಯ ಏಜೆಂಟ್ ಮತ್ತು ಪ್ರತಿ ಟೇಬಲ್ ಗೆ ಒಬ್ಬರಂತೆ 14 ಮಂದಿ ಮತ ಎಣಿಕೆ ಏಜೆಂಟ್ ಗಳು ಸೇರಿ 15 ಮಂದಿಯ ತಂಡ ತೆರಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಗೆ ತಲಾ 14 ಟೇಬಲ್ ಗಳಲ್ಲಿ ನಡೆಯುತ್ತದೆ. 8 ವಿಧಾನ ಸಭಾ ಕ್ಷೇತ್ತದಲ್ಲಿ ತಲಾ 14 ರಂತೆ ಒಟ್ಟು 112 ಟೇಬಲ್ ಗಳಿರುತ್ತದೆ. 15 ರಿಂದ 18 ಸುತ್ತುಗಳಲ್ಲಿ ವಿವಿಧ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.
ಸುಳ್ಯ ಕ್ಷೇತ್ರದ ಮತ ಎಣಿಕೆ 17 ಸುತ್ತುಗಳಲ್ಲಿ ನಡೆಯಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು ಮೊದಲಿಗೆ ಅಂಚೆ ಮತಗಳ ಎಣಿಕೆ ನಡೆಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಬೂತ್ ಗಳ ವಿವಿ ಪ್ಯಾಟ್ ಎಣಿಕೆ ಕೂಡ ನಡೆಯಲಿದೆ. ಮಧ್ಯಾಹ್ನದ ಬಳಿಕ ಪೂರ್ಣ ಫಲಿತಾಂಶ ಹೊರಬರುವ ನಿರೀಕ್ಷೆ ಇದೆ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…