ಮಂಗಳೂರು : ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಅಕ್ಟೋಬರ್ 23 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಬಂಟ್ವಾಳ ತಾಲೂಕು ಕಚೇರಿ, ಅ.24 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಅ. 25 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಡಬ ಗ್ರಾಮ ಪಂಚಾಯತ್ ಕಚೇರಿಗೆ ಭೇಟಿ ನೀಡುವರು. ಇದಲ್ಲದೇ ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು/ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ.
ಅನಾಮಧೇಯ ಅರ್ಜಿಗಳು ಬಂದಲ್ಲಿ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಾಗುವುದಿಲ್ಲ. ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ ನೋಟರಿಯಿಂದ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ.ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ರವರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : ಪೊಲೀಸ್ ಅಧೀಕ್ಷಕರ ಕಚೇರಿ -0824- 2429197, 9448390987, ಪೊಲೀಸ್ ಉಪಾಧೀಕ್ಷಕರ-1 ಕಚೇರಿ-0824-2453420, 8861688100, 9448530051, ಪೊಲೀಸ್ ಉಪಾಧೀಕ್ಷಕರ-2 ಕಚೇರಿ- 0824-2453420, 7026994128, ಪೊಲೀಸ್ ನಿರೀೀಕ್ಷಕರ ಕಚೇರಿ- 0824-2427237, 9449044377 ನ್ನು ಸಂಪರ್ಕಿಸಬೇಕು ಎಂದು ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…