ಮೈಸೂರು- ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿರುವ ಮೈಸೂರಿನ ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಸೋಮಣ್ಣಗೆ ಮತದಾರರು ಮತ್ತೆ ತಪರಾಕಿ ಹಾಕಿದ್ದಾರೆ.
“ಸಂವಿಧಾನ ಬದಲಾಯಿಸುವವರು ನಮ್ಮೂರಿಗೆ ಬರಬೇಡಿ” ಎಂದ ಗ್ರಾಮಸ್ಥರು ವರುಣ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣನಿಗೆ ಗೇಟ್ ಪಾಸ್ ಕೊಟ್ಟಿದ್ದಾರೆ.ಸಂವಿಧಾನ ಬದಲಿಸುವ ಬಿಜೆಪಿ ಪಕ್ಷದ ಅಭ್ಯರ್ಥಿಗೆ ನಮ್ಮೂರಿಗೆ ನೋ ಎಂಟ್ರಿ ಎಂದಿದ್ದಾರೆ.
ನಂಜನಗೂಡು ತಾಲೂಕಿನ ವರುಣ ಕ್ಷೇತ್ರದ ಬಿಳುಗಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರುಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಚಾರ ಕೈಗೊಂಡಿರುವ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ. ಬ್ಯಾಜ್ ಟು ಬ್ಯಾಕ್ ವಿರೋಧ ವ್ಯಕ್ತವಾಗಿದೆ.
“ಗ್ರಾಮಕ್ಕೆ ಬರುವುದಕ್ಕಿಂತ ಮುಂಚೆ ಗೇಟ್ ಪಾಸ್ ಕೊಟ್ಟಿಧದಾರೆ. ಬಿಳುಗಲಿ ಗ್ರಾಮದ ಅಂಬೇಡ್ಕರ್ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಯುವಕರು ಸೋಮಣ್ಣಗೆ ಧಿಕ್ಕಾರ ಕೂಗಿದ್ದಾರೆ.
ಡಾ.ಬಿ.ಆರ್ ಅಂಬೇಡ್ಕರ್ ರಿಗೆ ಜಯಘೋಷ ಕೂಗಿದ್ದಾರೆ. ಸಂವಿಧಾನ ಬದಲಿಸ್ತೀವಿ ಅಂದ್ರೆ ಸುಮ್ಮನಿರಲ್ಲ. ಅಂಬೇಡ್ಕರ್ ವಿರೋಧಿಗಳೆ ನಮ್ಮೂರಿಗೆ ಬರಲು ನಿಮಗೆ ನೈತಿಕತೆ ಇಲ್ಲ.
ಸಂವಿಧಾನದ ಅಡಿಯಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಸಂವಿಧಾನದ ಅಡಿಯಲ್ಲಿ ಸರ್ಕಾರ ನಡೆಸುವ ಇವರು ಸಂವಿಧಾನ ಬದಲಾಯಿಸುತ್ತೇವೆ ಅಂತಾರೆ. ಇಂತಹ ಸಂವಿಧಾನ ವಿರೋಧಿ ಬಿಜೆಪಿ ಪಕ್ಷಕ್ಕೆ ನಾವು ಮತ ಹಾಕಬೇಕಾ..? ಸಂವಿಧಾನ ಚೇಂಜ್ ಮಾಡಲು ಇವರು ಯಾರು” ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ಗ್ರಾಮಸ್ಥರಿಂದ ಪ್ರಶ್ನೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮನವೊಲಿಕೆಗೆ ಯತ್ನಿಸಿದರು. ಆದರೆ ಪಟ್ಟು ಬಿಡದ ಯುವಕರು, ಗ್ರಾಮಸ್ಥರು ಒಪ್ಪಲಿಲ್ಲ. ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದಿದೆ.
ಇದರಿಂದ ಸೋಮಣ್ಣ ಗ್ರಾಮಕ್ಕೆ ಬಾರದೆ ಹೊರಟು ಹೋದರು.
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…
ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 3/4 ಕಪ್ ,ನೀರು…
2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…
ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…
ಈಗಿನಂತೆ ಎಪ್ರಿಲ್ 29 ಹಾಗೂ 30 ರಂದು ಮಳೆ ಸ್ವಲ್ಪ ಕಡಿಮೆ ಇರುವ…
ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್ನಲ್ಲಿ ಪ್ರಧಾನಿ…