Advertisement
ಸಾಹಿತ್ಯ

ವರ್ಧಮಾನ ಉದಯೋನ್ಮುಖ ಪ್ರಶಸ್ತಿ ಪುರಸ್ಕಾರಕ್ಕೆ ಡಾ.ದೀಪಾ ಫಡ್ಕೆ ಆಯ್ಕೆ

Share

ಮಂಗಳೂರು: ಮೂಡಬಿದರೆಯ ವರ್ಧಮಾನ ಪೀಠ ನೀಡುವ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ ಪುರಸ್ಕಾರಕ್ಕೆ ಡಾ. ದೀಪಾ ಫಡ್ಕೆ ಆಯ್ಕೆಯಾಗಿದ್ದಾರೆ  ಹಾಗೂ ವರ್ಧಮಾನ ಪುರಸ್ಕಾರಕ್ಕೆ ಡಾ.ಬಸವರಾಜ ಕಲ್ಗುಡಿ  ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕಳೆದ 39 ವರ್ಷಗಳಿಂದ ಮೂಡುಬಿದಿರೆಯ ವರ್ಧಮಾನ ಪ್ರಶಸ್ತಿ ಪೀಠದ  ವತಿಯಿಂದ ಈ ಪ್ರಶಸ್ತಿ ನೀಡಲಾಗುತ್ತಿದೆ. ಜೀವಮಾನದ ಸಾಧನೆಗೆ ಹಿರಿಯ ಸಾಹಿತಿಗಳ ಕೃತಿಗೆ  ವರ್ಧಮಾನ ಪುರಸ್ಕಾರ ಹಾಗೂ ಉದಯೋನ್ಮುಖ ಬರಹಗಾರರು ಅಥವಾ ಸಾಹಿತಿಗಳಿಗೆ ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿ  ನೀಡಲಾಗುತ್ತಿದೆ.

 

ಡಾ.ದೀಪಾ ಫಡ್ಕೆ :

ದೀಪಾ ಫಡ್ಕೆ ಬೆಂಗಳೂರು, ಮೂಲತ: ದಕ್ಷಿಣ ಕನ್ನಡದ ಬೆಳ್ತಂಗಡಿಯವರು. ಇವರ ಇದುವರೆಗಿನ ಪ್ರಕಟಿತ ಕೃತಿಗಳು ಸಂಸ್ಕೃತಿ ಕುರಿತ ಬರಹಗಳ ಗುಚ್ಛವಾದ `ಋತ’, ಇವರ ಮೊದಲ ಕೃತಿ. `ಹರಪನಹಳ್ಳಿ ಭೀಮವ್ವ’ ಸೇರಿದಂತೆ ಒಟ್ಟು 7 ಕೃತಿಗಳು ಪ್ರಕಟವಾಗಿವೆ. ನಾಡಿನ ಪ್ರಮುಖ ಪತ್ರಿಕೆಗಳಾದ ಪ್ರಜಾವಾಣಿ, ವಿಜಯವಾಣಿ, ಉದಯವಾಣಿ, ವಿಜಯ ಕರ್ನಾಟಕ, ಹೊಸದಿಗಂತ, ಅಡ್ವೈಸರ್, ಕೊಳಲು, ತಿಲ್ಲಾನಗಳಿಗೆ ಅನೇಕ ಲೇಖನಗಳನ್ನು ಬರೆದಿದ್ದಾರೆ. ದೀಪಾ ಅವರ ಸಣ್ಣ ಕಥೆಗಳು ಮಯೂರ ಹಾಗೂ ಉದಯವಾಣಿಯಲ್ಲಿ ಪ್ರಕಟವಾಗಿದ್ದೂ ಅವರ `ತಾಯಾಗೋದು ಅಂದ್ರೆ’ ಕಥೆಗೆ ಬೆಂಗಳೂರಿನ ಕನ್ನಡ ಸಂಘರ್ಷ ಸಮಿತಿಯ ಅನುಪಮಾ ನಿರಂಜನ ಕಥಾಸ್ಪರ್ಧೆಯಲ್ಲಿ ಬಹುಮಾನ ಲಭಿಸಿದೆ.

 

ಡಾ.ಬಸವರಾಜ ಕಲ್ಗುಡಿ:

ಬೆಳಗಾವಿಯಯಲ್ಲಿ ಜನಿಸಿದ ಬಸವರಾಜ ಕಲ್ಗುಡಿಯವರು ಪ್ರಾಥಮಿಕ, ಮಾಧ್ಯಮಿಕ, ಪ್ರೌಢ ಮತ್ತು ಕಾಲೇಜು ವ್ಯಾಸಂಗವು ಬೆಂಗಳೂರಿನಲ್ಲಿ ನಡೆಸಿದರು.  ಎಂ.ಎ. (1975) ಪದವಿ. ‘ಅನುಭಾವ ಮತ್ತು ಸಾಂಸ್ಕೃತಿಕ ಸಮಸ್ಯೆಗಳು’ ಸಂಶೋಧನಾ ಪ್ರಬಂಧಕ್ಕೆ (1983) ಪಿಎಚ್.ಡಿ. ಪದವಿ ಪಡೆದರು.  ಕರ್ನಾಟಕದಲ್ಲಿನ ಮಾಸ್ತಿಕಲ್ಲು ಕುರಿತಾಗಿ ಕ್ಷೇತ್ರಕಾರ್ಯ ಮಾಡಿ ಮಂಡಿಸಿದ ಮತ್ತೊಂದು ಸಂಶೋಧನೆ `ಮಹಾಸತಿ ಆಚರಣೆ’. ಅವರ ಅಧ್ಯಯನ ಶಾಸನವನ್ನು ಕುರಿತಾಗಿದ್ತುದರೂ ಶಾಸನದ ಪಠ್ಯವನ್ನು ಕನ್ನಡ ಸಂಸ್ಕೃತಿಯ ಶೋಧನೆಗೆ ಪ್ರಮುಖ ಆಕರವಾಗಿ ಬಳಸಿದ್ದಾರೆ. ಸಂಸ್ಕೃತಿಯನ್ನು ಕುರಿತಂತೆ ವ್ಯಾಖ್ಯಾನಿಸುವಲ್ಲಿ ಕಲ್ಗುಡಿಯವರು ಸಂಸ್ಕೃತಿಯಲ್ಲಿನ ಚಲನೆಯ ಪಲ್ಲಟವನ್ನು ಸಮಗ್ರವಾಗಿ ವಿವಿಧ ನೆಲೆಗಳಿಂದ ಶೋಧಿಸುತ್ತಾರೆ. ಕಲ್ಗುಡಿಯವರು ವಚನ ಸಾಹಿತ್ಯ ಕುರಿತ ಸಂಶೋಧನಾತ್ಮಕ ಅಧ್ಯಯನದಲ್ಲಿ ವಿವಿಧ ಜ್ಞಾನಶಿಸ್ತುಗಳನ್ನು ಒಳಗೊಂಡಿದೆ. ಅವರು ವರ್ತಮಾನದ ಹಿನ್ನೆಲೆಯಿಂದ ವಚನ ಸಂಸ್ಕೃತಿಯನ್ನು ವ್ಯಾಖ್ಯಾನಿಸಿದ್ದು ಕನ್ನಡ ವಿಮರ್ಶೆಯ ಲೋಕದಲ್ಲಿಯೇ ವಿಶಿಷ್ಟ ಎಂದು ಪರಿಗಣಿಸಲಾಗುತ್ತದೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

53 minutes ago

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿಕ್ಕಬಾಗೇವಾಡಿಯ ಸಾವಯವ ಕೃಷಿಕ ಕಲ್ಲಪ್ಪ ಪಂಡಿತಪ್ಪ ನೇಗಿನಾಳ…

6 hours ago

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ

ರಾಜ್ಯಾದ್ಯಂತ ನವರಾತ್ರಿ ಸಂಭ್ರಮ ಮನೆಮಾಡಿದ್ದು, ಶೃಂಗೇರಿ, ಹೊರನಾಡು, ಕಟೀಲು ಮತ್ತು ಕೊಲ್ಲೂರು ಸೇರಿದಂತೆ…

1 day ago

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಬೃಹತ್ ಧರಣಿಯಲ್ಲಿ ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯನ್ನು…

1 day ago

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

2 days ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

2 days ago