ಗುತ್ತಿಗಾರು: ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 17 ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭಾ ಕಾರ್ಯಕ್ರಮ ಸೋಮವಾರ ಸಂಜೆ ನಡೆಯಿತು.
ಸಭೆಯಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ಅರ್ಚಕ ವೇ.ಮೂ. ಮಹಾಬಲೇಶ್ವರ ಭಟ್ “ದೇವತಾ ಕಾರ್ಯಗಳು ಆಡಂಬರ, ಅದ್ದೂರಿತನಕ್ಕೆ ಮೀಸಲಾಗದೇ ಲೋಕಕಲ್ಯಾಣಾರ್ಥವಾಗಿ ಇರಬೇಕು, ಗಣೇಶೋತ್ಸವಗಳಲ್ಲಿ ಭಾರತೀಯ ಪದ್ಧತಿಯ ವಾದ್ಯಘೋಷಗಳು ಹೆಚ್ಚಾಗಿ ಕಂಡುಬರಬೇಕು. ಇದು ಮುಂದಿನ ಪೀಳಿಗೆಗೆ ಉತ್ತಮ ಸಂದೇಶ ನೀಡುತ್ತದೆ ಎಂದರು.
ವೇದಿಕೆಯಲ್ಲಿ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಹೊಸೊಳಿಕೆ, ಗಣೇಶೋತ್ಸವ ಸಮಿತಿಯ ಕೋಶಾಧಿಕಾರಿ ದುರ್ಗೇಶ್ ಪಾರೆಪ್ಪಾಡಿ ಉಪಸ್ಥಿತರಿದ್ದರು. ಸತೀಶ್ ಮೂಕಮಲೆ ಅಧ್ಯಕ್ಷತೆ ವಹಿಸಿದ್ದರು.
ಗೌರವಾಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಮೊಟ್ಟೆಮನೆ ವಂದಿಸಿದರು. ಕಿಶೋರ್ ಕುಮಾರ್ ಪೈಕ ನಿರೂಪಿಸಿದರು. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…