ಮಡಿಕೇರಿ : ಅರಬ್ಬೀ ಸಮುದ್ರ ಮತ್ತು ಲಕ್ಷ ದ್ವೀಪದಲ್ಲಿ ವಾಯು ಭಾರ ಕುಸಿತವಾದ ಕಾರಣ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಸುಮಾರು 5 ದಿನಗಳ ಕಾಲ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಅ.20 ರಿಂದ 23 ರವರೆಗೆ ಆರೆಂಜ್ ಅಲರ್ಟ್ ಹಾಗೂ ಅ.23 ರಿಂದ 24 ರವರೆಗೆ ಎಲ್ಲೋ ಅಲರ್ಟ್ ಘೋಷಿಸಿ ಜಿಲ್ಲಾಡಳಿತ ಎಚ್ಚರಿಕೆಯ ಮುನ್ಸೂಚನೆ ನೀಡಿದೆ.
ಮೊದಲ ಮೂರು ದಿನಗಳು 115.50 ಯಿಂದ 204.4 ಮಿ.ಮೀ ಮಳೆಯಾಗಲಿದೆ ಮತ್ತು ಕೊನೆಯ ಒಂದು ದಿನ 64.5 ರಿಂದ 115.50 ಮಿ.ಮೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಅವಧಿಯಲ್ಲಿ ಬೆಟ್ಟ, ಗುಡ್ಡ, ತಗ್ಗು ಪ್ರದೇಶ ಮತ್ತು ಈಗಾಗಲೇ ಮಳೆಹಾನಿಗೊಂಡಿರುವ ವ್ಯಾಪ್ತಿಯ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮಡಿಕೇರಿ, ಭಾಗಮಂಡಲ ಮತ್ತು ವಿರಾಜಪೇಟೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ನಿರಂತರ ಎರಡರಿಂದ ಮೂರು ಗಂಟೆ ಧಾರಾಕಾರ ಮಳೆಯಾಗಿ ಬಿಡುವು ನೀಡುತ್ತಿದೆಯಾದರೂ ಮೋಡ ಕವಿದ ಮತ್ತು ಮಂಜು ಮುಸುಕಿದ ವಾತಾವರಣ ಜನರನ್ನು ಕಾಡುತ್ತಿದೆ. ಸೋಮವಾರಪೇಟೆಯಲ್ಲೂ ಮಳೆಯಾಗಿದೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…