ಗುಜರಾತ್ : ವಾಯು ಚಂಡಮಾರುತ ತನ್ನ ಪ್ರಭಾವ ಹೆಚ್ಚಿಸಿದೆ. ಜೂ.12 ಬುಧವಾರ ರಾತ್ರಿಯ ಒಳಗೆ 130-140 ಕಿ.ಮೀ. ವೇಗದಲ್ಲಿ ಗುಜರಾತ್ ಕರಾವಳಿ ಭಾಗವನ್ನು ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಚಂಡಮಾರುತವು ಉತ್ತರದ ಕಡೆ ಬೀಸಲಿದ್ದು ಗುಜರಾತ್ ಮೀನುಗಾರರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದ್ದು ಕರಾವಳಿ ತೀರದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಈ ನಡುವೆ ಗೃಹಸಚಿವ ಅಮಿತ್ ಶಾ, ಗೃಹ ಕಾರ್ಯದರ್ಶಿ, ಭೂ ವಿಜ್ಞಾನಗಳ ಸಚಿವಾಲಯದ ಕಾರ್ಯದರ್ಶಿ, ಹವಾಮಾನ ಉಲಾಖೆ ಮತ್ತು ಗೃಹ ಸಚಿವಾಲಯದ ಇತರ ಹಿರಿಯ ಅಧಿಕಾರಿಗಳ ಸಭೆಯೂ ಇಂದು ನಡೆದಿದೆ. ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಯಿತು.
ಮಂಗಳವಾರ ಸಂಜೆ ವೇಳೆಗೆ ‘ವಾಯು’ ಚಂಡಮಾರುತ ಗೋವಾದಿಂದ 350 ಕಿ.ಮೀ ನೈರುತ್ಯಕ್ಕೆ ಹಾಗೂ ಮುಂಬಯಿನಿಂದ 510 ಕಿ.ಮೀ ಮತ್ತು ವೆರಾವಲ್‌ನಿಂದ 650 ಕಿ.ಮೀ ದಕ್ಷಿಣ-ನೈರುತ್ಯ ಭಾಗದಲ್ಲಿ ಕೇಂದ್ರೀಕೃತವಾಗಿತ್ತು. ಅದು ಉತ್ತರದ ಕಡೆಗೆ ಮುಂದುವರಿಯುತ್ತಿದ್ದು, ಮುಂದಿನ 12 ಗಂಟೆಗಳಲ್ಲಿ ತೀವ್ರ ಚಂಡಮಾರುತವಾಗಿ ಶಕ್ತಿ ವೃದ್ಧಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಚಂಡಮಾರುತದ ಕಾರಣದಿಂದ ಮುಂದಿನ 24 ಗಂಟೆಗಳಲ್ಲಿ ಗುಜರಾತ್, ಕರ್ನಾಟಕ, ಗೋವಾ ಸೇರಿದಂತೆ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.ಕೇರಳದಲ್ಲಿಯೂ ವಾಯು ಚಂಡಮಾರುತದಿಂದ ಮುಂಗಾರು ವಿಳಂಬವಾಗಿದೆ. ಕೇರಳದಲ್ಲೂ ಯಾವುದೇ ಅನಾಹುತ ಸಂಭವಿಸಿದಂತೆ ಈಗಾಗಲೇ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು, ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಚೆನ್ನೈ ಪ್ರದೇಶದಲ್ಲೂ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಪ್ರಭಾವ ಹೆಚ್ಚಿಸಿದೆ.
ಹವಾಮಾನ ಇಲಾಖೆಯ ಸೂಚನೆ ಮೇರೆಗೆ ತಕ್ಷಣ ಎಲರ್ಟ್ ಆಗಿರುವ ಗೃಹ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ 26 ತಂಡಗಳನ್ನು ಸಜ್ಜುಗೊಳಿಸಿದೆ. ದೋಣಿಗಳು, ಮರ ಕತ್ತರಿಸುವ ಉಪಕರಣಗಳು, ದೂರ ಸಂಪರ್ಕ ಸಲಕರಣೆಗಳು- ಎಲ್ಲವನ್ನೂ ಸನ್ನದ್ಧ ಸ್ಥಿತಿಯಲ್ಲಿಡಲಾಗಿದೆ. ಅಲ್ಲದೆ ಇನ್ನೂ 10 ಹೆಚ್ಚುವರಿ ತಂಡಗಳನ್ನು ಸನ್ನದ್ಧಗೊಳಿಸಲು ಸೂಚನೆ ನೀಡಿದೆ. ಯಾವುದೇ ಪರಿಸ್ಥಿತಿ ಎದುರಿಸಲು ಸಿದ್ಧವಾಗಿರಬೇಕು ಎಂದು ಎಲ್ಲಾ ಇಲಾಖೆಗಳಿಗೆ, ವಿಭಾಗಗಳಿಗೆ ಸೂಚನೆ ನೀಡಿದೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…