ನೆಟ್ಟಣ: ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣಕ್ಕೆ ಆಗಮಿಸಿದ ವಿಜಯಪುರ-ಮಂಗಳೂರು ಸೂಪರ್ ಫಾಸ್ಟ್ ರೈಲಿಗೆ ಸುಬ್ರಹ್ಮಣ್ಯ ರೋಡ್‍ನ ರೈಲು ನಿಲ್ದಾಣದಲ್ಲಿ ಸ್ವಾಗತ ಕೋರಲಾಯಿತು. ರೈಲಿಗೆ ಹೂಹಾರ ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಗುರುಪಾದ , ಸುರೇಶ್ ಭಟ್.ಬಿ, ಉದಯ ಕುಮಾರ್ ನೂಚಿಲ, ಬಸವರಾಜ್, ಪರಮೇಶ್, ಶಂಕರ, ಮಂಜು, ಸಂತೋಷ್, ಕರಿಬಸವ ಉಪಸ್ಥಿತರಿದ್ದರು.
ವಿಜಯಪುರದಿಂದ ಮಂಗಳೂರು ಸಂಪರ್ಕಿಸಲು ಮತ್ತು ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ಮೊದಲಾದ ಕರಾವಳಿಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ಸಂದರ್ಶಿಸಲು ಈ ರೈಲು ವಿಶೇಷ ಅನುಕೂಲತೆ ಒದಗಿಸಿದೆ. ಸಂಜೆ 6ಗಂಟೆಗೆ ವಿಜಯಪುರದಿಂದ ಹೊರಡಲಿರುವ ರೈಲು ಬಸವನ ಬಾಗೇವಾಡಿ, ಆಲಮಟ್ಟಿ, ಬಾಗಲಕೋಟೆ, ಗದಗ, ಹುಬ್ಬಳ್ಳಿ, ಹಾವೇರಿ, ದಾವಣಗೆರೆ, ಅರಸಿಕೆರೆ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಪುತ್ತೂರು ಮೂಲಕ ಮರುದಿನ ಮಧ್ಯಾಹ್ನ 12.40ಕ್ಕೆ ಮಂಗಳೂರು ತಲುಪಲಿದೆ.ಅದೇ ರೀತಿ ಮಂಗಳೂರಿನಿಂದ ಸಂಜೆ 4.30ಕ್ಕೆ ಹೊರಟು ಮರುದಿನ ಬೆಳಗ್ಗೆ 11.45ಕ್ಕೆ ವಿಜಯಪುರ ತಲುಪಲಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel