ಮಂಜೇಶ್ವರ: ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ಹದಿನೆಂಟು ಪೇಟೆ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀಮದ್ ಅನಂತೇಶ್ವರ ದೇವಸ್ಥಾನದ ಷಷ್ಠಿ ಮಹೋತ್ಸವದ ಪ್ರಯುಕ್ತ ಶ್ರೀ ದೇವರ ಬ್ರಹ್ಮ ರಥೋತ್ಸವ ಸೋಮವಾರ ಸಹಸ್ರಾರು ಭಾವುಕ ಭಜಕರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ಜರುಗಿತು.
ಷಷ್ಠಿ ಮಹೋತ್ಸವ ಪ್ರಯುಕ್ತ ಬೆಳಿಗ್ಗೆ ಶ್ರೀ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ, ಶತ ಕಲಶಾಭಿಷೇಕ, ಗಂಗಾಭಿಷೇಕ ನಡೆದವು. ಬಳಿಕ ಯಜ್ಞ ಮಂಟಪದಲ್ಲಿ ಉಭಯ ದೇವರುಗಳಾದ ಭದ್ರ ನರಸಿಂಹ ಹಾಗೂ ಸುಬ್ರಮಣ್ಯ ದೇವರ ಸಮ್ಮುಖದಲ್ಲಿ ಯಜ್ಞದ ಪೂರ್ಣಾಹುತಿ, ತದನಂತರ ವಿಶೇಷವಾಗಿ ಪುಷ್ಪದಿಂದ ಅಲಂಕರಿಸಿದ ಸ್ವರ್ಣ ಲಾಲಕಿಯಲ್ಲಿ ಶ್ರೀ ದೇವರ ವಿಗ್ರಹಗಳನ್ನು ಇರಿಸಿ ಭುಜ ಸೇವೆಯ ಮೂಲಕ ಸ್ವಯಂಸೇವಕರಿಂದ ಪಲ್ಲಕಿ ಉತ್ಸವ ನಡೆಯಿತು.
ಬ್ರಹ್ಮ ರಥದ ಪೂಜೆ, ಶ್ರೀ ದೇವರು ರಥಾರೂಢರಾದ ಬಳಿಕ ಮಂಗಳಾರತಿ ನಡೆದು ರಥೋತ್ಸವ ನಡೆಯಿತು. ಕೇರಳ, ಕರ್ನಾಟಕ , ಮುಂಬೈ, ಗುಜರಾತ್, ದೆಹಲಿ ಹಾಗೂ ವಿದೇಶದಿಂದ ನೂರಾರು ಸಮಾಜ ಭಾಂದವರು ರಥೋತ್ಸವದಲ್ಲಿ ಪಾಲ್ಗೊಂಡು ಪುನೀತರಾದರು.
ಚಿತ್ರಗಳು : ಮಂಜು ನೀರೇಶ್ವಾಲ್ಯ
26.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…