ವಿದೇಶದಿಂದ ಬಂದವರಿಗೆ 14 ದಿನ ಕ್ವಾರಂಟೈನ್‌ ಕಡ್ಡಾಯ

July 26, 2020
12:34 PM

ವಿದೇಶಗಳಿಂದ ಬಂದವರ ಕ್ವಾರಂಟೈನ್‌ ಅವಧಿ ಬಗ್ಗೆ ಅವಾಸ್ತವಿಕ ಮಾಹಿತಿ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಬರುತ್ತದೆ. ಈ ಬಗ್ಗೆ ತಿಳಿಸುವುದೇನೆಂದರೆ, ವಿದೇಶಗಳಿಂದ ಬಂದವರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್‌ ಇರಬೇಕಾಗುತ್ತದೆ. ಇದರಲ್ಲಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್‌ ನಲ್ಲಿ(ಲಾಡ್ಜ್) ಇರಲೇಬೇಕು. ಈ ಅವಧಿಯಲ್ಲಿ ಅವರ ಗಂಟಲುದ್ರವ ಪರೀಕ್ಷೆ ನಡೆಸಿ ನೆಗೆಟಿವ್‌ ಬಂದರೆ, 7ನೇ ದಿನದ ನಂತರ ಹೋಂ ಕ್ವಾರಂಟೈನ್‌ ಗೆ ಕಳುಹಿಸಲಾಗುತ್ತದೆ.

ಆದರೆ, ವಿದೇಶದಿಂದ ಬಂದವರಲ್ಲಿ 10 ವರ್ಷದೊಳಗಿನ ಮಕ್ಕಳು, 60 ವರ್ಷದ ಮೇಲಿನವರು, ಗರ್ಭಿಣಿಯರು, ಬೇರೆ ಖಾಯಿಲೆಗಳಿಂದ ಬಳಲುತ್ತಿರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ (ಲಾಡ್ಜ್)ಗೆ ಕಳುಹಿಸಿದ ಮರುದಿನವೇ ಅವರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುತ್ತದೆ. ನಂತರ ಲಾಬ್‌ ವರದಿ ನೆಗೆಟಿವ್‌ ಬಂದರೆಮಾತ್ರ ಅವರನ್ನು 14 ದಿನಗಳ ಹೋಂ ಕ್ವಾರಂಟೈನ್‌ ಗೆ ಕಳುಹಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್
October 17, 2026
7:30 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ
October 17, 2026
7:23 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ
October 16, 2026
5:14 PM
by: ವಿಶೇಷ ಪ್ರತಿನಿಧಿ
ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ
October 16, 2026
3:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror