ವಿದೇಶಗಳಿಂದ ಬಂದವರ ಕ್ವಾರಂಟೈನ್ ಅವಧಿ ಬಗ್ಗೆ ಅವಾಸ್ತವಿಕ ಮಾಹಿತಿ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಬರುತ್ತದೆ. ಈ ಬಗ್ಗೆ ತಿಳಿಸುವುದೇನೆಂದರೆ, ವಿದೇಶಗಳಿಂದ ಬಂದವರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಇರಬೇಕಾಗುತ್ತದೆ. ಇದರಲ್ಲಿ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ(ಲಾಡ್ಜ್) ಇರಲೇಬೇಕು. ಈ ಅವಧಿಯಲ್ಲಿ ಅವರ ಗಂಟಲುದ್ರವ ಪರೀಕ್ಷೆ ನಡೆಸಿ ನೆಗೆಟಿವ್ ಬಂದರೆ, 7ನೇ ದಿನದ ನಂತರ ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ.
ಆದರೆ, ವಿದೇಶದಿಂದ ಬಂದವರಲ್ಲಿ 10 ವರ್ಷದೊಳಗಿನ ಮಕ್ಕಳು, 60 ವರ್ಷದ ಮೇಲಿನವರು, ಗರ್ಭಿಣಿಯರು, ಬೇರೆ ಖಾಯಿಲೆಗಳಿಂದ ಬಳಲುತ್ತಿರುವವರನ್ನು ಸಾಂಸ್ಥಿಕ ಕ್ವಾರಂಟೈನ್ (ಲಾಡ್ಜ್)ಗೆ ಕಳುಹಿಸಿದ ಮರುದಿನವೇ ಅವರ ಗಂಟಲು ದ್ರವ ಮಾದರಿ ಸಂಗ್ರಹಿಸಲಾಗುತ್ತದೆ. ನಂತರ ಲಾಬ್ ವರದಿ ನೆಗೆಟಿವ್ ಬಂದರೆಮಾತ್ರ ಅವರನ್ನು 14 ದಿನಗಳ ಹೋಂ ಕ್ವಾರಂಟೈನ್ ಗೆ ಕಳುಹಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…