ಬಾಳಿಲ: ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ಸಂಸ್ಥಾಪಕ ನೆಟ್ಟಾರು ವೆಂಕಟಸುಬ್ಬರಾವ್ ಸ್ಮೃತಿ ದಿನಾಚರಣೆ ಹಾಗೂ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಪೆರಡಾಲ ನವಜೀವನ ಪ್ರೌಢಶಾಲಾ ಶಿಕ್ಷಕಿ ಪ್ರಭಾವತಿ ಕೆದಿಲಾಯ ಉದ್ಘಾಟಿಸಿ ಕನ್ನಡ ಭಾಷೆಯ ಉಳಿಕೆಗಾಗಿ ಪ್ರಯತ್ನಿಸುವ ವಿಚಾರದ ಕುರಿತು ಉಪನ್ಯಾಸ ನೀಡಿದರು. ವಿದ್ಯಾರ್ಥಿನಿಯರು ಶಾಲಾ ಸಂಸ್ಥಾಪಕ ದಿ|ವೆಂಕಟಸುಬ್ಬ ರಾವ್ ಕುರಿತು ಗೀತೆಗಳನ್ನು ಹಾಡಿದರು. ವಿದ್ಯಾರ್ಥಿ ಧನುಷ್ ಸಂಸ್ಥಾಪಕರ ಕುರಿತು ಮಾತನಾಡಿದರು. ಬಳಿಕ ತಾಲೂಕು ಮಟ್ಟದ ಸಾಹಿತ್ಯೋತ್ಸವ ಕಾರ್ಯಕ್ರಮ ನಡೆಯಿತು. ಪ್ರೌಢಶಾಲಾ ವಿಭಾಗಕ್ಕೆ ಭಾವಗೀತೆ, ಆಶುಭಾಷಣ ಮತ್ತು ರಸಪ್ರಶ್ನೆ, ಪ್ರಥಮಿಕ ವಿಭಾಗ ವಿದ್ಯಾರ್ಥಿಗಳಿಗೆ ಹಾಡು, ಚಿತ್ರ ರಚನೆ ಸ್ಪರ್ಧೆಗಳು ನಡೆಯಿತು.
ನೂರಕ್ಕಿಂತಲೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅಂತಿಮವಾಗಿ ಆತಿಥೇಯ ವಿದ್ಯಾಬೋಧಿನಿ ಪ್ರೌಢಶಾಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕ ಎನ್.ವೆಂಕಟ್ರಮಣ ಭಟ್ ವಹಿಸಿದರು. ಪ್ರಭಾರ ಮುಖ್ಯ ಶಿಕ್ಷಕ ಯಶೋಧರ ನಾರಾಲು ಪ್ರಸ್ತಾವಿಸಿ, ಸ್ವಾಗತಿಸಿದರು. ಶಿಕ್ಷಕ ವೆಂಕಟೇಶ್‍ಕುಮಾರ್ ವಂದಿಸಿದರು. ಲೋಕೇಶ್ ಬೆಳ್ಳಿಗೆ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…