ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.