Advertisement
ಅಪರಾಧ

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗಳು ಸಾವು

Share
ಬಂಟ್ವಾಳ : ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಆಕಸ್ಮಿಕವಾಗಿ  ಸ್ಪರ್ಶಿಸಿ  ತಂದೆ, ಮಗಳು ಸ್ಥಳದಲ್ಲೇ ಮೃತಪಟ್ಟ  ಘಟನೆ ಬಂಟ್ವಾಳ ತಾಲೂಕಿನ ವಾಮದಪದವು ಸಮೀಪದ ಬಾರಕಿನಡಿ ಎಂಬಲ್ಲಿ ಮಂಗಳವಾರ ಸಂಭವಿಸಿದೆ. ಕೃಷಿಕ ಗೋಪಾಲಕೖಷ್ಣ  ಶೆಟ್ಟಿ (65) ಮತ್ತು ಅವರ ಪುತ್ರಿ ದಿವ್ಯಾ ಶೆಟ್ಟಿ (29) ಮೃತಪಟ್ಟವರು.
ಗೋಪಾಲಕೃಷ್ಣ ಅವರು ಚೆನ್ನೈತ್ಯೋಡಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ.
ಮಂಗಳವಾರ ಸಂಜೆ ತಂದೆ ಹಾಗೂ  ಮಗಳು  ಹುಲ್ಲು ತರಲೆಂದು ತೋಟಕ್ಕೆ ತೆರಳಿದ್ದರು. ಈ ವೇಳೆ ತೋಟದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕ ತುಳಿದು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಳೆಯದಾದ ತಂತಿಗಳನ್ನು ಮೆಸ್ಕಾಂ  ಬದಲಿಸದೆ ಇರುವುದು ಈ ಘಟನೆಗೆ ಮೂಲ ಕಾರಣವೆಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಘಟನಾ ಸ್ಥಳಕ್ಕೆ ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಬಂಟ್ವಾಳ ತಹಶೀಲ್ದಾರ್
ಸಹಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

1 hour ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

7 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

8 hours ago

ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ

ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…

8 hours ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…

8 hours ago

531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ – ಈಗಲೇ ಮಾಡಬೇಕಾದ ಮುಂಜಾಗ್ರತಾ ಕ್ರಮಗಳು ಏನು..?

ಕರ್ನಾಟಕದ 111 ತಾಲೂಕುಗಳ ವ್ಯಾಪ್ತಿಯ 531 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು,…

9 hours ago