ಸುಳ್ಯ: ಅಲ್ಯೂಮಿನಿಯಂ ಏಣಿ ಹೈಟೆನ್ಸನ್ ತಂತಿಗೆ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಪೇರಾಲು ಸಮೀಪ ನಡೆದಿದೆ. ಮಂಡೆಕೋಲು ಗ್ರಾಮದ ಬಾಳೆಕೋಡಿ ಹೊನ್ನಪ್ಪ ಗೌಡರ ಪುತ್ರ ಸೀತಾರಾಮ (36)ಮೃತಪಟ್ಟ ದುರ್ದೈವಿ.
ಬಾಳೆಕೋಡಿ ಕೃಷ್ಣಪ್ಪರವರ ತೋಟದಲ್ಲಿ ಕೆಲಸಕ್ಕೆ ತೆರಳಿದ್ದ ಸೀತಾರಾಮರು ಹಿಡಿದುಕೊಂಡಿದ್ದ ಏಣಿ ಹೈಟನ್ಷನ್ ತಂತಿಗೆ ಆಕಸ್ಮಿಕ ತಗುಲಿ ಶಾಕ್ ಹೊಡೆದಿದೆ. ಶಾಕ್ ನಿಂದ ತೀವ್ರವಾಗಿ ಗಾಯಗೊಂಡ ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ನಂತರ ಕೆವಿಜಿ ಆಸ್ಪತ್ರೆಗೆ ಕರೆ ತಂದರಾದರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ರೆಂದು ತಿಳಿದು ಬಂದಿದೆ. ಮೃತರು ವಿವಾಹಿತರಾಗಿದ್ದು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…
ಹಾನಿಯಾದ ಮನೆ ಮತ್ತು ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ, ಯಾವುದೇ ಪ್ರಕರಣಗಳು ಬಾಕಿ…
ಭಾರತದ ಸ್ವಚ್ಛತಾ ಅಭಿಯಾನಕ್ಕೆ ವೇಗ ದೊರೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.…