ಬಾಳಿಲ: ನಮ್ಮೂರಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಹೀಗೊಂದು ಚರ್ಚೆ ಬಾಳಿಲದಲ್ಲಿ ಮಂಗಳವಾರ ನಡೆಯಿತು.
ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿಯ ವತಿಯಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ ನಡೆದ ಬೆಳ್ಳಾರೆ ವಿದ್ಯುತ್ ಸಬ್‍ಸ್ಟೇಷನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶದಲ್ಲಿ ವಿವಿಧ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.
ಕೃಷಿಕ ಡಾ| ಪಿ.ಆರ್ ಭಟ್ ಮಾತನಾಡಿ, ವಿದ್ಯುತ್ ಸಮಸ್ಯೆ ತಾಲೂಕಿನ ಒಂದು ಮೂಲಭೂತವಾದ ಸಮಸ್ಯೆಯಾಗಿದೆ. ಜನಪ್ರತಿನಿಧಿಗಳ ಮೇಲೆ ಸತತವಾಗಿ ಒತ್ತಡ ಹೇರುವುದರಿಂದ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿದೆ. ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕೃಷಿಕರು ಕಂಗಾಲಾಗಿದ್ದಾರೆ. ಜೊತೆಗೆ ಕುಡಿಯುವ ನೀರಿನ ಪೂರೈಕೆಗೆ ತೀವ್ರ ತೊಂದರೆಯಾಗುತ್ತಿದೆ ಎಂದರು. ಇದಕ್ಕಾಗಿ ನಾವೆಲ್ಲರೂ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ ಸರಕಾರದ ಗಮನವನ್ನು ನಮ್ಮೂರಿನ ವಿದ್ಯುತ್ ಕೊರತೆ ಕಡೆಗೆ ಸೆಳೆಯಬೇಕು ಎಂದು ಹೇಳಿದರು.
ಮಾಹಿತಿ ಹಕ್ಕುಗಳ ಬಗ್ಗೆ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಹಾಗೂ ಇಲಾಖಾ ಮಾಹಿತಿಯನ್ನು ಪಂಜ ಉಪವಿಭಾಗದ ಜೂನಿಯರ್ ಇಂಜಿನಿಯರ್ ಪ್ರಸನ್ನ ನೀಡಿದರು.
ಬಳಕೆದಾರರ ವತಿಯಿಂದ ಸರಕಾರ ಹಾಗೂ ಸಂಬಂಧಿಸಿದ ಸಚಿವರಿಗೆ ಸಲ್ಲಿಸಿದ ದೂರು ಮತ್ತು ದೊರೆತ ಪ್ರತಿಕ್ರಿಯೆ ಪ್ರತಿಯನ್ನು ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಚಾಲಕ ಎಂ.ಜಿ ಸತ್ಯನಾರಾಯಣ ವಾಚಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್.ಜಿ ಪ್ರಭಾಕರ ರೈ ವಹಿಸಿದರು. ವೇದಿಕೆಯಲ್ಲಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ರಮೇಶ್ ಕೋಟೆ, ಎ.ಇ ಇ ಹರೀಶ್ ಉಪಸ್ಥಿತರಿದ್ದರು.
ನಿಡ್ಮಾರು ರಾಜಾರಾಮ್ ಸ್ವಾಗತಿಸಿ, ಜಗನ್ನಾಥ ರೈ ವಂದಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಎನ್.ಗೋಪಾಲಕೃಷ್ಣ ಭಟ್ ಪ್ರಸ್ತಾವನೆಗೈದರು. ಎನ್.ಜಿ ಲೋಕನಾಥ ರೈ ಕಾರ್ಯಕ್ರಮ ನಿರೂಪಿಸಿದರು.
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…
ರಾಜ್ಯದಲ್ಲಿ ತುಮಕೂರು, ಚಿತ್ರದುರ್ಗ, ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಹೆಚ್ಚಾಗಿ ಹುಣಸೆಹಣ್ಣು ಬೆಳೆಯಲಾಗುತ್ತಿದೆ. ಈ…
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಗೆ 200…