ಸುಳ್ಯ: ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಸೆಕ್ಷನ್‍ವಾರು ಸಭೆ ನಡೆಸಬೇಕು, ಪ್ರಮುಖ ರಸ್ತೆಗಳ ಬದಿಯಲ್ಲಿ ವಿದ್ಯುತ್ ಕಂಬ ಮತ್ತು ನೀರಿನ ಪೈಪ್ ಅಳವಡಿಕೆ ಮಾಡುವಾಗ ರಸ್ತೆಯ ಅಗಲೀಕರಣಕ್ಕೆ ಮತ್ತು ಅಭಿವೃದ್ಧಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಎಸ್.ಅಂಗಾರ ಮೆಸ್ಕಾಂಗೆ ಸೂಚನೆ ನೀಡಿದ್ದಾರೆ.
ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕುಡಿಯುವ ನೀರಿನ ಸಮಸ್ಯೆ, ಲೋವೊಲ್ಟೇಜ್ ಮತ್ತು ವಿದ್ಯುತ್ ಕಡಿತದ ಬಗ್ಗೆ ದೂರು ಬರದಂತೆ ನೋಡಿಕೊಳ್ಳಿ, ಬೇಸಿಗೆ ಬಂದೊಡನೆ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ವಿದ್ಯುತ್ ಸಮಸ್ಯೆ ಉಲ್ಬಣಿಸುತ್ತದೆ. ಆದುದರಿಂದ ಯಾವ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ಇದೆ ಎಂಬುದನ್ನು ಗುರುತಿಸಿ ಅದರ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಸ್.ಅಂಗಾರ ಸೂಚನೆ ನೀಡಿದ್ದಾರೆ. ಪ್ರತಿಯೊಂದು ಇಲಾಖೆಯೂ ಬಂದಿರುವ ಅನುದಾನವನ್ನು ಪೂರ್ತಿಯಾಗಿ ಬಳಸಿಕೊಳ್ಳಬೇಕು. ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಎಚ್ಚರ ವಹಿಸಿ, ಅನುದಾನ ಲ್ಯಾಪ್ಸ್ ಆದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
ಕೃಷಿ ಕಾಲನಿ ಯೋಜನೆಯಲ್ಲಿ 1976ರಲ್ಲಿ ಐವರ್ನಾಡಿನಲ್ಲಿ ಎಸ್‍ಸಿ ವಿಭಾಗದ ಜನರಿಗೆಂದು ಭೂಮಿ ಮೀಸಲಾಗಿದ್ದರೂ ಆ ಸ್ಥಳ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಅರಣ್ಯ ಇಲಾಖೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಎಸ್.ಎನ್.ಮನ್ಮಥ ಸಭೆಯ ಗಮನಕ್ಕೆ ತಂದರು. ಈ ಕುರಿತು ಪರಿಶೀಲನೆ ನಡೆಸಿ ವರದಿ ನೀಡುವಂತೆ ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಣ್ಣ ನೀರಾವರಿ ಯೋಜನೆಯಡಿಯಲ್ಲಿ ನಿರ್ಮಾಣವಾದ ಕಿಂಡಿ ಅಣೆಗಟ್ಟುಗಳ ನೀರನ್ನು ಬಳಸುತ್ತಿದ್ದಾರೆ ಎಂದು ಎಂಟು ಗ್ರಾಮಗಳಲ್ಲಿ ಬಳಕೆದಾರರಿಂದ ಕರ ವಸೂಲಾತಿಗೆ ಸರ್ವೆ ನಡೆಸುವಂತೆ ಆದೇಶ ಬಂದಿದೆ ಎಂದು ಎಸ್.ಎನ್.ಮನ್ಮಥ ಹೇಳಿದರು. ಫೆಬ್ರವರಿ ತಿಂಗಳ ವೇಳೆಗೆ ಕಿಂಡಿ ಅಣೆಕಟ್ಟುಗಳಲ್ಲಿ ನೀರು ಖಾಲಿ ಆಗಿ ಬಳಿಕ ನೀರು ಸಿಗದ ಸ್ಥಿತಿ ಇದೆ. ಮೇ ತಿಂಗಳ ಕೊನೆಯವರೆಗೆ ಕಿಂಡಿ ಅಣೆಕಟ್ಟಿನಲ್ಲಿ ನೀರು ಒದಗಿಸಿ ಎಂದು ಅವರು ಆಗ್ರಹಿಸಿದರು. ಈ ಕುರಿತು ಚರ್ಚೆ ನಡೆಯಿತು. ಕಿಂಡಿ ಅಣೆಕಟ್ಟುಗಳ ನಿರ್ವಹಣೆಯನ್ನು ಮಾಡಿ ಮೇ ಕೊನೆಯವರೆಗೆ ನೀರು ಒದಗಿಸಲು ಕ್ರಮ ಕೈಗೊಳ್ಳಿ ಮತ್ತು ಪ್ರತಿ ಕಡೆಗಳಲ್ಲಿ ಬಳಕೆದಾರರ ಸಭೆ ನಡೆಸಿ ಮನವರಿಕೆ ಮಾಡಿ ಗೊಂದಲ ನಿವಾರಿಸಿ ಎಂದು ಶಾಸಕ ಅಂಗಾರ ಸೂಚಿಸಿದರು.
ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಸೆಕ್ಷನ್‍ವಾರು ಸಭೆ ನಡೆಸಬೇಕು, ಪ್ರಮುಖ ರಸ್ತೆಗಳ ಬದಿಯಲ್ಲಿ ವಿದ್ಯುತ್ ಕಂಬ ಮತ್ತು ನೀರಿನ ಪೈಪ್ ಅಳವಡಿಕೆ ಮಾಡುವಾಗ ರಸ್ತೆಯ ಅಗಲೀಕರಣಕ್ಕೆ ಮತ್ತು ಅಭಿವೃದ್ಧಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕರು ಸೂಚಿಸಿದರು.
ಅಂಬೇಡ್ಕರ್ ಭವನಕ್ಕೆ 1.5 ಕೋಟಿ ಅನುದಾನ ಮಂಜೂರಾಗಿದ್ದರೂ ಹಣ ಖರ್ಚು ಮಾಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು ಅಧಿಕಾರಿಗಳನ್ನು ಪ್ರಶ್ನಿಸಿದರು. ಬಜೆಟ್‍ನಲ್ಲಿ ಅನುದಾನ ನೀಡಿದರೂ ಸರಿಯಾದ ಕಾಲಕ್ಕೆ ಕಾಮಗಾರಿ ನಡೆಸದೆ ಅನುದಾನ ಲ್ಯಾಪ್ಸ್ ಆಗುತಿದೆ ಎಂದು ಅವರು ಹೇಳಿದರು. ಅಂಬೇಡ್ಕರ್ ಭವನ ಕಾಮಗಾರಿಯ ಪ್ರಗತಿ ಮತ್ತು ಅನುದಾನ ಖರ್ಚು ಮಾಡಿರುವ ಬಗ್ಗೆ ಕೂಡಲೇ ವರದಿ ನೀಡುವಂತೆ ಶಾಸಕರು ತಾಕೀತು ಮಾಡಿದರು.
ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಉಪಾಧ್ಯಕ್ಷೆ ಶುಭದಾ ಎಸ್.ರೈ, ಸ್ಥಾಯಿ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಉಪಸ್ಥಿತರಿದ್ದರು.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…