ಬೆಳ್ಳಾರೆ:ವಿದ್ಯೆ ಕಲಿಕೆಯು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಮಾನವನ ಗುಣ ನಡತೆಯನ್ನು ವಿದ್ಯೆಯು ಶ್ರೇಷ್ಠತೆಯತ್ತ ಕೊಂಡೊಯ್ಯಬಲ್ಲದು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಹೇಳಿದರು.
2019-20ನೇ ಸಾಲಿನ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ವಿದ್ಯೆಯಿಂದ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ. ಇಸ್ಲಾಂ ವಿದ್ಯೆಗೆ ಮಹತ್ವ ಕೊಟ್ಟ ಧರ್ಮವಾಗಿದ್ದು, ಬದುಕಿನ ಗುರಿಯೆಡೆಗಿನ ಸ್ಪಷ್ಟತೆಯನ್ನು ತೋರಿಸಿಕೊಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿಯ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದ್ದರು.ವೇದಿಕೆಯಲ್ಲಿ ಮಸೀದಿಯ ಆಡಳಿತ ಮಂಡಳಿ ಸದಸ್ಯರು, ಮದರಸ ಅಧ್ಯಾಪಕರುಗಳಾದ ಸುಲೈಮಾನ್ ಮುಸ್ಲಿಯಾರ್, ಝೈನುದ್ದೀನ್ ಮುಸ್ಲಿಯಾರ್ ಹಾಗು ಸಭೆಯಲ್ಲಿ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.
ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಅಧ್ಯಾಪಕ ಹಸೈನಾರ್ ಮುಸ್ಲಿಯಾರ್ ವಂದಿಸಿದರು.
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…