ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್. ಕೊಡುಗೆ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆಯು ಶುಕ್ರವಾರ ಜರುಗಿತು.
ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೂಮಿಪೂಜೆ ನೆರವೇರಿಸಿದರು. ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಎಲ್ಲಾ ರೀತಿಯ ನೆರವು, ಸಹಕಾರ ನೀಡುವುದಾಗಿ ಅವರು ಹೇಳಿದರು. ವಿವೇಕಾನಂದ ವಿದ್ಯಾಸಂಸ್ಥೆಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಅಗತ್ಯವಿದೆ. ಅದಕ್ಕೆ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.
ಶಾಸಕ ಎಸ್.ಅಂಗಾರ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಎಂ.ಆರ್.ಪಿ.ಎಲ್.ಜನರಲ್ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ನ.ಸೀತಾರಾಮ, ಶಾಲಾ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್, ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್ ವಿನೋಬಾನಗರ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…