ಮಡಿಕೇರಿ : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮುಂಗಾರಿನ ಆರಂಭಕ್ಕೆ ಪೂರಕವಾಗಿ ಮೋಡ, ಮಂಜಿನೊಂದಿಗೆ ಹನಿಮಳೆಯಾಗುತ್ತಿದ್ದರೆ, ವೀರಾಜಪೇಟೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೋಮವಾರದಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದರೆ, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಳೆ ಪ್ರಮಾಣ ಕಡಿಮೆ ಇತ್ತು.
ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಇಂಚಿನಷ್ಟು ಮಳೆಯಾಗಿದ್ದರೆ, ಕಾವೇರಿನದಿ ಪಾತ್ರದ ನಾಪೋಕ್ಲು, ಮೂರ್ನಾಡು, ಸಿದ್ದಾಪುರ, ಕುಶಾಲನಗರ ವಿಭಾಗಗಳಲ್ಲಿ ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಮಳೆ ವಿವರ:
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 12.47 ಮಿ.ಮೀ. ಕಳೆದ ವರ್ಷ ಇದೇ ದಿನ 104.56 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 205.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 761.49 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 19.10 ಮಿ.ಮೀ. ಕಳೆದ ವರ್ಷ ಇದೇ ದಿನ 116.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 242.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1056.94 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.47 ಮಿ.ಮೀ. ಕಳೆದ ವರ್ಷ ಇದೇ ದಿನ 92.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 254.43 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 598.07 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.83 ಮಿ.ಮೀ. ಕಳೆದ ವರ್ಷ ಇದೇ ದಿನ 104.12 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 120.56 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 629.46 ಮಿ.ಮೀ. ಮಳೆಯಾಗಿತ್ತು.
ಹಾರಂಗಿ ಜಲಾಶಯದ ನೀರಿನ ಮಟ್ಟ :
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2804.92 ಅಡಿಗಳು, ಕಳೆದ ವರ್ಷ ಇದೇ ದಿನ 2806.80 ಅಡಿ.
ಹಾರಂಗಿಯಲ್ಲಿ ಬಿದ್ದ ಮಳೆ 4.20 ಮಿ.ಮೀ., ಇಂದಿನ ನೀರಿನ ಒಳಹರಿವು 76 ಕ್ಯೂಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 60 ಕ್ಯೂಸೆಕ್. ನಾಲೆಗೆ 50 ಕ್ಯುಸೆಕ್.