ವಿರಾಜಪೇಟೆ-ಮಾಕುಟ್ಟ ರಸ್ತೆಯ ಬದಿಯಲ್ಲಿ ಭೂ ಕುಸಿತ : 3 ದಿನಗಳ ಕಾಲ ರಸ್ತೆ ಸಂಚಾರ ನಿಷೇಧ

August 5, 2019
11:05 AM

ಮಡಿಕೇರಿ: ಮಳೆಯ ಕಾರಣದಿಂದ ಸೋಮವಾರ ಬೆಳಗ್ಗೆ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ರಸ್ತೆಯ ಬದಿ ಕುಸಿತದ ಪ್ರದೇಶಕ್ಕೆ ಕೊಡಗು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶಿಸಿದರು.  ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸಲು ಜಿಲ್ಲಾಡಳಿತ ಕೋರಿದೆ.

 

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror