ಮಡಿಕೇರಿ: ಮಳೆಯ ಕಾರಣದಿಂದ ಸೋಮವಾರ ಬೆಳಗ್ಗೆ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರಸ್ತೆಯ ಬದಿ ಕುಸಿತದ ಪ್ರದೇಶಕ್ಕೆ ಕೊಡಗು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶಿಸಿದರು. ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸಲು ಜಿಲ್ಲಾಡಳಿತ ಕೋರಿದೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…