ಸುಳ್ಯ: ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಕಾರ್ಯನಿರ್ವಹಿಸುವ ಗ್ರಂಥಾಲಯ ಮೇಲ್ವಿಚಾರಕರ ಒಕ್ಕೂಟವು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದ.ಕ ಜಿಲ್ಲಾ ಅಪರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.
ರಾಜ್ಯದಲ್ಲಿ ಸುಮಾರು 6 ಸಾವಿರಕ್ಕಿಂತಲೂ ಹೆಚ್ಚು ಇದ್ದು ಕಡಿಮೆ ವೇತನದಲ್ಲಿ ಕೆಲಸ ನಿರ್ವಹಿಸುತ್ತಿದ್ದೇವೆ, ದಶಕಗಳಿಂದ ವೇತನ ಹೆಚ್ಚಳ ಹಾಗೂ ಕನಿಷ್ಟ ವೇತನ ಪಾವತಿ ಮತ್ತು ಅನುಕಂಪದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಬೇಕು ಎಂದು ಹಲವಾರು ಹೋರಾಟ, ಪ್ರತಿಭಟನೆ ಮಾಡಿದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಇತ್ತೀಚೆಗೆ ನೊಂದು ವಿಧಾನಸೌಧದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ರೇವಣ್ಣಕುಮಾರರಿಗೆ ತಕ್ಷಣ ಸರಕಾರ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ. ಸಂಘದ ಜಿಲ್ಲಾಧ್ಯಕ್ಷ ವೆಂಕಪ್ಪ ಹಾಗೂ ತಾಲೂಕು ಪದಾಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?