ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ವಿಭಾಗದ ವಿದ್ಯಾರ್ಥಿನಿ ಸಿಂಧೂರ ಸರಸ್ವತಿ ಇವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 2018-19ನೇ ಶೈಕ್ಷಣಿಕ ಸಾಲಿನ ಅಂತಿಮ ಪರೀಕ್ಷೆಯಲ್ಲಿ ಪ್ರಥಮ ರಾಂಕ್ ಹಾಗೂ 6 ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಪ್ರಥಮ ರಾಂಕ್ ನೊಂದಿಗೆ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ವಿಭಾಗದ ಪ್ರಥಮ ರಾಂಕ್ ವಿಜೇತರಿಗೆ ಕೊಡಲಾಗುವ ಜೈನ್ ವಿಶ್ವವಿದ್ಯಾನಿಲಯದ ಚಿನ್ನದ ಪದಕ, ಡಾ.ಆರ್.ಎನ್.ಶೆಟ್ಟಿ ಚಿನ್ನದ ಪದಕ, ಎಸ್‍ಜೆಸಿಇ ಬೆಳ್ಳಿಹಬ್ಬದ ಚಿನ್ನದ ಪದಕ, ಜ್ಯೋತಿ ಚಿನ್ನದ ಪದಕ, ಆರ್.ಎನ್.ಶೆಟ್ಟಿ ಚಿನ್ನದ ಪದಕ ಮತ್ತು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ಚಿನ್ನದ ಪದಕ ಹೀಗೆ 6 ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಫೆಬ್ರವರಿ ತಿಂಗಳ 8ರಂದು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ 19ನೇ ವಾರ್ಷಿಕ ಘಟಿಕೋತ್ಸವದಲ್ಲಿ ಇದನ್ನು ಪ್ರಧಾನ ಮಾಡಲಾಗುತ್ತದೆ.
ಸಿಂಧೂರ ಸರಸ್ವತಿ ಅವರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ್ ಭಟ್ ಬಂಗಾರಡ್ಕ ಇವರ ಪುತ್ರಿ. ಸಿಂಧೂರ ಸರಸ್ವತಿ ಅವರ ಈ ಸಾಧನೆಗೆ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಅವರನ್ನು ಅಭಿನಂದಿಸಿದ್ದಾರೆ.
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…