ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ನೆರವು ಘಟಕದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮವು ಅ.18 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರಿನ ವಕೀಲರಾದ, ಶ್ರೀ ಸೂರ್ಯನಾರಾಯಣ ಎನ್. ಕೆ .ಮಾತನಾಡಿದರು. ಅವರು, “ಕಾನೂನಿನ ಅರಿವು ಎಲ್ಲರಿಗೂ ಅತ್ಯಗತ್ಯ. ಆದ್ದರಿಂದ ನಮ್ಮ ಸಂವಿಧಾನದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರು, ಉಚಿತ ಕಾನೂನಿನ ನೆರವು ಪಡೆಯಲು ಆರ್ಹರು ಎಂದು ಹೇಳಲಾಗಿದೆ. ಇದಕ್ಕಾಗಿ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ನೆರವು ಘಟಕಗಳನ್ನು ರಚಿಸಲಾಗಿದೆ. ಆದರೆ ಆರ್ಹರು ಮಾತ್ರಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾನೂನು ನೆರವು ಘಟಕದ ಸಂಯೋಜಕರಾದ ಶ್ರೀಮತಿ ಸಂಗೀತಾ ಎಸ್. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜಗದೀಶ್ ಸ್ವಾಗತಿಸಿ, ಸಿಂಧು ಬಿ. ವಂದಿಸಿದರು. ದೀಪೆನ್ ಉಪ್ರೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…