ಪುತ್ತೂರು: ಕರ್ನಾಟಕ ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು ಜಿಲ್ಲಾ ನ್ಯಾಯಾಂಗ, ದಕ್ಷಿಣ ಕನ್ನಡ ಜಿಲ್ಲೆ., ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಬೆಂಗಳೂರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ವಕೀಲರ ಸಂಘ ಪುತ್ತೂರು ಹಾಗೂ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇವುಗಳ ಸಹಯೋಗದಲ್ಲಿ ‘ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ – 2012’ ಇದರ ಕುರಿತು ಒಂದು ದಿನದ ರಾಜ್ಯಮಟ್ಟದ ಕಾರ್ಯಾಗಾರವು ಡಿ.7 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಸರಕಾರದ ಕಾನೂನು, ಸಂಸದೀಯ ವ್ಯವಹಾರ ಮತ್ತು ಸಣ್ಣ ನೀರಾವರಿ ಸಚಿವರಾದ ಜೆ. ಸಿ. ಮಾಧು ಸ್ವಾಮಿ ಈ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಂಜೀವ ಮಠಂದೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಲೂರು ಸತ್ಯನಾರಾಯಣ ಆಚಾರ್ಯ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಂಗಳೂರು, ಹೆಚ್.ಕೆ.ಜಗದೀಶ್ ವಿಶೇಷ ಕಾರ್ಯದರ್ಶಿಗಳು, ಕಾನೂನು ಇಲಾಖೆ, ಮತ್ತು ನಿರ್ದೇಶಕರು, ಕಾನೂನು ಮತ್ತು ಸಂಸದೀಯ ಸುಧಾರಣಾ ಸಂಸ್ಥೆ, ಬೆಂಗಳೂರು ಹಾಗೂ ಅಭಿಯೋಗ ಮತ್ತು ಸರ್ಕಾರದ ವ್ಯಾಜ್ಯಗಳ ಇಲಾಖೆ, ಡಾ. ಪಿ. ಈಶ್ವರ್ ಭಟ್ ಉಪ ಕುಲಪತಿಗಳು, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ., ರುಡಾಲ್ಫ್ ಪಿರೇರಾ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ಪುತ್ತೂರು., ಬಿ ಅನಂತ ಶಂಕರ್, ಕೆ.ಎ.ಎಸ್. ಪ್ರಭಾರ ಸಹಾಯಕ ಕಮಿಷನರ್, ಪುತ್ತೂರು., ಶಿವಪ್ರಸಾದ್ ಆಳ್ವ ಉಪನಿರ್ದೇಶಕರು, ಅಭಿಯೋಗ ಮತ್ತು ಸರ್ಕಾರದ ವ್ಯಾಜ್ಯ ಇಲಾಖೆ ಮಂಗಳೂರು.,ಮಂಜುನಾಥ ಗೌರವಾನ್ವಿತ ಹೆಚ್ಚುವರಿ ಹಿರಿಯ ವ್ಯವಹಾರಿಕ ಸಿವಿಲ್ ನ್ಯಾಯಾಧೀಶರು ಹಾಗೂ ಜೆ.ಎಮ್.ಎಫ್.ಸಿ. ಪುತ್ತೂರು., ಮನೋಹರ್ ಕೆ.ವಿ. ಅಧ್ಯಕ್ಷರು, ವಕೀಲರ ಸಂಘ ಪುತ್ತೂರು ಮತ್ತು ಇತರ ಗಣ್ಯರು ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಂತರ ನಡೆಯಲಿರುವ ಅವಧಿಗಳಲ್ಲಿ ಪೋಕ್ಸೋ ಕಾಯ್ದೆ ಹಿನ್ನಲೆ, ಅದರ ಅನುಷ್ಠಾನದಲ್ಲಿ ಅಧಿಕಾರಗಳ ಪಾತ್ರ ಮತ್ತು ಅನುಷ್ಠಾನದಲ್ಲಿರುವ ಸವಾಲುಗಳ ಕುರಿತು ವಿವಿಧ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಪತ್ರಿಕಾಗೋಷ್ಠಿಯಲ್ಲಿ ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಗಣೇಶ್ ಜೋಷಿ ಬಿ., ಸದಸ್ಯರಾದ ಯಶೋಧರ ಜೈನ್, ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ. ರವೀಂದ್ರ, ಪ್ರಾಂಶುಪಾಲರಾದ ಅಕ್ಷತಾ ಎ. ಪಿ., ಉಪನ್ಯಾಸಕರಾದ ಕುಮಾರ್ ಎಸ್. ಹಾಜರಿದ್ದರು.