ಪುತ್ತೂರು: ಭಾರತದ ಆತ್ಮವೇ ಆಧ್ಯಾತ್ಮಿಕತೆ, ನಂಬಿಕೆ. ಅದನ್ನು ಕಂಡುಕೊಳ್ಳುವ ಪ್ರಯತ್ನವನ್ನು ಇಂದಿನ ಯುವಜನತೆ ಮಾಡಬೇಕು. ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಕೂಡ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಇಂದು ಮಹಾಪುರುಷರ ಆದರ್ಶಗಳು, ತತ್ವಗಳು ಕೇವಲ ಭಾವಚಿತ್ರಗಳಿಗೆ ಮಾತ್ರ ಸೀಮಿತವಾಗಿದೆ. ಸಾಮಾಜಿಕ ಜಾಲತಾಣಗಳು ಇಂದಿನ ಯುವಸಮೂಹದ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಹೀಗಾಗಿ ಇವುಗಳಿಂದ ಮುಕ್ತಿ ಹೊಂದಿ ಉತ್ತಮ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರಿನ ಮೈತ್ರೇಯ ಗುರುಕುಲದ ಬೌದ್ಧಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ವಿಭಾಗದ ಮುಖ್ಯಸ್ಥ ದುರ್ಗಾಪರಮೇಶ್ವರ ಅಭಿಪ್ರಾಯಪಟ್ಟರು.
ಅವರು ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ವಿಭಾಗದ ಆಶ್ರಯದಲ್ಲಿ ಐಕ್ಯುಎಸಿ ಘಟಕ ಮತ್ತು ವಾಣಿಜ್ಯ ಮತ್ತು ನಿರ್ವಹಣ ಸಂಘದ ಸಹಯೋಗದಲ್ಲಿ ಗುರುವಾರ ನಡೆದ ‘ಪ್ಯಾಟ್ರಿಯೋಟಿಸಂ ಇನ್ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನಿಬಲಿಟಿ’ ಎಂಬ ವಿಷಯದ ಕುರಿತ ಉಪನ್ಯಾಸಕ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತಾಡಿದರು. ಇಂದಿನ ಯುವ ಸಮುದಾಯ ತಮ್ಮ ಉನ್ನತಿಗೆ ಏನು ಮಾಡಬೇಕು ಅದನ್ನು ತಿಳಿಯದೆ ಕೇವಲ ಹೊರಪ್ರಪಂಚದ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಇದು ಮಾತ್ರ ಶೋಚನೀಯ. ಉತ್ತಮರ ಸಂಘ ಮಾಡಿದಾಗ ಉತ್ತಮ ವಿಚಾರಗಳು ಹೊರ ಹೊಮ್ಮುತ್ತವೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಸಾಮಾಜಿಕ ಜವಾಬ್ದಾರಿ ಇರಬೇಕು. ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು. ಇಂದಿನ ಯುವಜನತೆಯಲ್ಲಿ ಒಂದು ವಿಷಯದ ಬಗ್ಗೆ ಮಾಹಿತಿ ತುಂಬಾ ಇದೆ. ಆದರೆ ಅವರಲ್ಲಿ ಅದರ ಜ್ಞಾನದ ಕೊರತೆ ಇದೆ. ಇಂದು ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಾಮಾಜಿಕ ಜವಾಬ್ದಾರಿ ಏನೆಂಬುದನ್ನು ಮೊದಲು ಅರಿಯಬೇಕು ಎಂದು ಹೇಳಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ, ವಾಣಿಜ್ಯ ಮತ್ತು ನಿರ್ವಹಣ ಸಂಘದ ಅಧ್ಯಕ್ಷ ಅಂಕಿತ್ ಕೆ.ಸಿ., ಕಾರ್ಯದರ್ಶಿ ಶಾಂತನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ರದ್ಧಾ ವಂದಿಸಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.
ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಸಿಬಂದಿ ವರ್ಗದವರ ಜಂಟಿ…
ನವೆಂಬರ್ 9 ಅಥವಾ 10 ರಿಂದ ದಕ್ಷಿಣ ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ…
ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು.
ಗ್ರಾಮೀಣ ಮಹಿಳೆಯರು ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಅರಣ್ಯ, ಪರಿಸರ ಸಚಿವ ಈಶ್ವರ ಬಿ.ಖಂಡ್ರೆ…
ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024025 ನೇ ಸಾಲಿನಲ್ಲಿ ಎಫ್ಎಕ್ಯೂ ಗುಣಮಟ್ಟದ…
ದೀಪಾವಳಿ ಅಂಗವಾಗಿ ಚಿಕ್ಕಮಗಳೂರು ಜಿಲ್ಲೆಯ ಬಿಂಡಿಗ ದೇವಿರಮ್ಮ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿ,…