ವಿವೇಕಾನಂದ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

September 18, 2019
8:00 PM

ಪುತ್ತೂರು: ಯುವಜನರೊಂದಿಗೆ ಪ್ರತಿಯೊಂದು ವಿಷಯದ ಕುರಿತು ವಿಚಾರವಿನಿಮಯ ಮಾಡುವುದರಿಂದ ಆವಿಷ್ಕಾರ ನಡೆಯಲು ಸಾಧ್ಯ. ಇದು ಸಂಶೋಧಕರ ಹಾಗೂ ವಿದ್ಯಾರ್ಥಿಗಳ ನಡುವಿನ ಅಂತರವನ್ನು ದೂರ ಮಾಡುತ್ತದೆ. ವಿಜ್ಞಾನ ಕ್ಷೇತ್ರದಲ್ಲಿ ಸವಾಲುಗಳು ಮತ್ತು ತೊಡಕುಗಳು ಸಾಮಾನ್ಯ ಹಾಗಾಗಿ ಮಾಹಿತಿ ಕಲೆಹಾಕುವುದಕ್ಕಿಂತ ಅರ್ಥಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ಹಾಗಾದರೆ ಮಾತ್ರ ಹೊಸ ಆವಿಷ್ಕಾರಗಳನ್ನು ಮಾಡಲು ಸಾಧ್ಯ ಎಂದು ಕೇರಳ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಟಿ.ಎಸ್.ಅನಿರುದ್ಧನ್ ಹೇಳಿದರು.

Advertisement

ಅವರು ಬುಧವಾರ  ವಿವೇಕಾನಂದ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ರಸಾಯನಶಾಸ್ತ್ರ ವಿಭಾಗಗಳು ಕಾಲೇಜಿನ ಐಕ್ಯುಎಸಿ ಘಟಕ ಮತ್ತು ಮಂಗಳೂರು ವಿವಿ ರಸಾಯನಶಾಸ್ತ್ರ ಅಧ್ಯಾಪಕರ ಸಂಘದ ಸಂಯುಕ್ತಾಶ್ರಯದಲ್ಲಿ ಕರೆಂಟ್ ಟ್ರೆಂಡ್ಸ್ ಇನ್ ಕೆಮಿಕಲ್ ರಿಸರ್ಚ್ ಆ್ಯಂಡ್ ಡೆವಲಪ್‍ಮೆಂಟ್ ಎಂಬ ವಿಷಯದ ಕುರಿತು ಆಯೋಜಿಸಲಾದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ.ಜಯರಾಮ ಭಟ್, ರಸಾಯನಶಾಸ್ತ್ರ ಎನ್ನುವುದು ಕೇವಲ ಪ್ರಯೋಗಾಲಯದೊಳಗೆ ಯಾರೋ ಕೆಲವರು ನಡೆಸುವ ಅಧ್ಯಯನ ಎಂಬ ತಪ್ಪು ಕಲ್ಪನೆ ಅನೇಕರಲ್ಲಿದೆ. ಆದರೆ ಇದು ಎಲ್ಲಾ ರಂಗಗಳಲ್ಲೂ ಅವಶ್ಯಕವೆನಿಸುವ ವಿಷಯವೇ ಆಗಿದೆ. ರಾಷ್ಟ್ರೀಯ ವಿಚಾರ ಸಂಕಿರಣಗಳು ಸಮಾಜಕ್ಕೆ ಕೊಡುಗೆಗಳನ್ನು ನೀಡುವಂತಾಗಬೇಕು ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಅಭಿವೃದ್ಧಿಯನ್ನು ಅನೇಕ ಸಂದರ್ಭಗಳಲ್ಲಿ ನಾವು ಸಂಖ್ಯಾತ್ಮಕವಾಗಿ ಗುರುತಿಸುತ್ತೇವೆ. ಆದರೆ ನಿಜವಾಗಿ ಅದು ಗುಣಾತ್ಮಕವಾದದ್ದು. ವಿಷಯವನ್ನು ಅರ್ಥ ಮಾಡಿಕೊಳ್ಳುವುದು ಅದರ ಉಪಯೋಗವನ್ನು ಪಡೆದುಕೊಳ್ಳುವುದು ನಿಜವಾದ ಸಂಶೋಧನೆ ಎನಿಸಿಕೊಳ್ಳುತ್ತದೆ. ರಸಾಯನಶಾಸ್ತ್ರ ವಿಷಯದ ವಿವಿಧ ವಿಭಾಗಗಳಾದ ಆಗ್ರೋ ಕೆಮಿಸ್ಟ್ರಿ, ಗ್ರೀನ್ ಕೆಮಿಸ್ಟ್ರಿ, ಫಾರ್ಮಾಸೆಟಿಕಲ್ ಕೆಮಿಸ್ಟ್ರಿ ಮೊದಲಾದ ವಿಷಯಗಳ ಬಗೆಗೆ ಅಧ್ಯಯನಗಳು ಅವ್ಯಾಹತವಾಗಿ ನಡೆಯುತ್ತಿವೆ ಎಂದು ನುಡಿದರಲ್ಲದೆ ಜ್ಞಾನವನ್ನು ಹಂಚುವುದು ಅತ್ಯಂತ ಅಗತ್ಯವಾದ ವಿಚಾರ ಎಂದು ನುಡಿದರು.

ಈ ಸಂದರ್ಭ ರಸಾಯನಶಾಸ್ತ್ರದ ಕುರಿತಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ಜಯಶ್ರೀ ಹಾಗೂ ತೇಜಶ್ರೀ ಪ್ರಾರ್ಥಿಸಿದರು. ಕಾಲೇಜಿನ ಪದವಿ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ ಸ್ವಾಗತಿಸಿದರು. ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸವಿತಾ ವಂದಿಸಿದರು. ವಿದ್ಯಾರ್ಥಿನಿ ದಿಶಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |
July 12, 2025
1:52 PM
by: ಸಾಯಿಶೇಖರ್ ಕರಿಕಳ
ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ
July 12, 2025
11:32 AM
by: The Rural Mirror ಸುದ್ದಿಜಾಲ
ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ
July 12, 2025
7:56 AM
by: ದ ರೂರಲ್ ಮಿರರ್.ಕಾಂ
ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ
July 12, 2025
7:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group