Advertisement
ಕಾರ್ಯಕ್ರಮಗಳು

ವಿವೇಕಾನಂದ ಕಾಲೇಜಿನಲ್ಲಿ ಬೆಂಕಿ ಅವಘಡ: ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳ ಪ್ರಾತ್ಯಕ್ಷಿಕೆ

Share

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಬೆಂಕಿ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳು ಮತ್ತು ಸುರಕ್ಷತಾ ವಿಧಾನಗಳ ಕುರಿತು ಗುರುವಾರ ಕಾರ್ಯಾಗಾರ ನಡೆಯಿತು.

Advertisement
Advertisement
Advertisement

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ವ್ಯವಸ್ಥಾಪಕ ಪಾಲುದಾರ ರಾಜೇಶ್ ಶೆಟ್ಟಿ ಬೆಂಕಿ ಅವಘಡಗಳು ಸಂಭವಿಸಿದಾಗ ಸ್ವಯಂ ರಕ್ಷಣೆಯ ವಿಧಾನಗಳ ಬಗ್ಗೆ ಮಾತನಾಡಿದರು. ಬೆಂಕಿಯ ಮೂಲವನ್ನು ಹೊಂದಿಕೊಂಡು ವಿವಿಧ ರೀತಿಯ ಬೆಂಕಿ ಆರಿಸುವ ವಿಧಾನಗಳ ಬಗ್ಗೆ ತಿಳಿಸಿದರು. ಬೆಂಕಿ ಅಪಘಾತಗಳನ್ನು ತಡೆಗಟ್ಟುವ ವಿಧಾನಗಳು, ಅಪಘಾತ ನಡೆದ ನಂತರ ಲಭ್ಯವಿರುವ ವ್ಯವಸ್ಥೆಯಲ್ಲಿ ಹೇಗೆ ಬೆಂಕಿಯ ಪರಿಣಾಮಗಳನ್ನು ಕನಿಷ್ಟ ಮಟ್ಟಕ್ಕೆ ತರಬಹುದು ಎಂಬ ಬಗ್ಗೆ ಮಾಹಿತಿ ನೀಡಿದರು. ಬೆಂಕಿ ಆರಿಸುವ ವಿವಿಧ ರೀತಿಯ ಉಪಕರಣಗಳು ಮತ್ತು ಅವುಗಳನ್ನು ಉಪಯೋಗಿಸುವ ಬಗ್ಗೆ ಹಾಗೂ ಬೆಂಕಿ ಆರಿಸುವ ಉಪಕರಣಗಳ ತಯಾರಿ, ರಿಪೇರಿ ಮತ್ತು ಸಂಬಂಧಿಸಿದ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.

Advertisement

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ನಿರ್ದೇಶಕ ಕೃಷ್ಣ ಶ್ರೀನಿವಾಸ ಬಾಬು ಮತ್ತು ಅವರ ತಂಡದವರು ಬೆಂಕಿ ಅವಘಡ ಸಂಭವಿಸಿದಾಗ ಬೆಂಕಿ ಆರಿಸುವ ವಿಧಾನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅನೇಕ ವಿದ್ಯಾರ್ಥಿಗಳು ಇದರ ಸ್ವಯಂ ಅನುಭವ ಪಡೆದುಕೊಂಡರು.

ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಕಾರಂತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಸಂಘದ ಸಂಯೋಜಕ ಪ್ರೊ. ಶಿವಪ್ರಸಾದ್ ಸ್ವಾಗತಿಸಿ, ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರು ಮತ್ತು ಬಿಎಸ್ಸಿ, ಎಂಎಸ್ಸಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರೈತ ಉಪಯೋಗಿ ಬಗೆ ಬಗೆಯ ಸರಕು ಸಾಗಣೆ ಗಾಡಿಗಳು

ಬದಲಾದ ಕಾಲದಲ್ಲಿ ನಾವು ಇಂತಹ ಪರಿಕರಕೊಳ್ಳುವ ಮೊದಲು ನಮಗೆಷ್ಟು ಇದು ಪ್ರಯೋಜನಕಾರಿ ಎಂದು…

1 hour ago

ಪ್ರಯಾಗ್ ರಾಜ್ ನಲ್ಲಿ  ಮಹಾ ಕುಂಭಮೇಳ | 150ಕ್ಕೂ ಹೆಚ್ಚು ವಿಶೇಷ ರೈಲು

ಐತಿಹಾಸಿಕ ಕುಂಭಮೇಳ ನಡೆಯುತ್ತಿರುವ  ಪ್ರಯಾಗ್ ರಾಜ್ ನಲ್ಲಿ ಮುಖ್ಯಮಂತ್ರಿ  ಯೋಗಿ ಆದಿತ್ಯನಾಥ್ ಅಧ್ಯಕ್ಷತೆಯಲ್ಲಿ …

2 hours ago

ಆಧುನಿಕತೆಯಿಂದಾಗಿ ಕೃಷಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ

ರಾಸಾಯನಿಕಗಳನ್ನು ಹೊಂದಿರುವ ಗೊಬ್ಬರದ ಅತಿಯಾದ ಬಳಕೆಯಿಂದಾಗಿ ಭೂಮಿಯಲ್ಲಿ ಎರೆಹುಳು ಸೇರಿದಂತೆ ಎಲ್ಲ ಜೀವಿಗಳು…

2 hours ago

ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಿಶೇಷ ಫಿಲ್ಟರ್ ಕಾಫಿ ಕೆಫೆ – ಸರ್ಕಾರ ಒಪ್ಪಂದ | ಕಾಫಿ ಉದ್ಯಮ ಉತ್ತೇಜಿಸಲು ಮಹತ್ವದ ಹೆಜ್ಜೆ |

ಕರ್ನಾಟಕದ ಹಲವೆಡೆ ಕಾಫಿ ನವೋದ್ಯಮಕ್ಕೆ ಅವಕಾಶಗಳನ್ನು ಸೃಷ್ಟಿಸಿ, ಸ್ವ ಸಹಾಯ ಗುಂಪುಗಳ ಸುಮಾರು…

2 hours ago

ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ |  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಕೃಷಿ ಸದೃಢವಾಗಿದ್ದರೆ ದೇಶ ಸದೃಢವಾಗಿರುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ. …

2 hours ago

ಬೇಸಿಗೆಯಲ್ಲಿ ಲೋಡ್  ಶೆಡ್ಡಿಂಗ್ ಇಲ್ಲ | ಇಂಧನ ಸಚಿವ ಕೆ ಜೆ ಜಾರ್ಜ್

ಬೇಸಿಗೆಯಲ್ಲಿ ಈ ಬಾರಿ ಲೋಡ್  ಶೆಡ್ಡಿಂಗ್ ಮಾಡುವುದಿಲ್ಲ  ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್…

2 hours ago