ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯಿಂದ ಸಮಾಜವನ್ನು ಅರಿತುಕೊಳ್ಳಲು ಹಾಗೆಯೇ ಸಮಾಜದಲ್ಲಿ ಉತ್ತಮ ವ್ಯಕ್ತಿಯನ್ನು ರೂಪಿಸಲು ಇದು ಸಹಕಾರಿಯಾಗುತ್ತದೆ. ನಾವು ನಾಲ್ಕು ಗೋಡೆಗಳಿಂದ ಹೊರಬಂದು ಸಮಾಜದಲ್ಲಿ ಬೆರೆಯುವಂತೆ ಮಾಡುತ್ತಾ ಜೀವನ ದರ್ಶನವನ್ನು ನೀಡುತ್ತದೆ ಎಂದು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಅಭಿಪ್ರಾಯಪಟ್ಟರು.
ಅವರು ಮಂಗಳೂರು ವಿವಿ, ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪುತ್ತೂರು ತಾಲೂಕಿನ ಸಾಜ ಸರಕಾರಿ ಪರಿಶಿಷ್ಟ ವರ್ಗಗಳ ಆಶ್ರಮ ಶಾಲೆಯಲ್ಲಿ ನಡೆಯುತ್ತಿರುವ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಇತ್ತೀಚೆಗೆ ಮಾತನಾಡಿದರು. ವಿದ್ಯಾರ್ಥಿಗಳು ವರ್ಷಕ್ಕೊಮ್ಮೆ ಇಂತಹ ಶಿಬಿರದಲ್ಲಿ ಸೇರುವುದರಿಂದ ಸಮಾಜಸೇವೆ ಎಂದರೇನು ಹಾಗೂ ಪ್ರತಿಯೊಬ್ಬ ನಾಗರಿಕನ ಪಾತ್ರ ಎಂತಹದ್ದು ಎಂಬುದನ್ನು ಇಲ್ಲಿ ಕಲಿಯಲು ಸಾಧ್ಯ. ಅದೇ ರೀತಿ ಇಲ್ಲಿ ಸಿಗುವ ಅನುಭವ ಜೀವನಕ್ಕೆ ಬೇಕಾದ ಪಾಠವನ್ನು ಕಲಿಸುತ್ತದೆ ಎಂದು ಹೇಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಅನನುಕೂಲತೆ ಇರುವಲ್ಲಿ ಪ್ರತಿಭೆಗಳು ಬೆಳಗುತ್ತವೆ. ಅದಕ್ಕೆ ವೇದಿಕೆಯನ್ನು ನೀಡುತ್ತಿರುವುದು ಎನ್‍ಎಸ್‍ಎಸ್ ಆಗಿದೆ. ಇದರಿಂದ ಅನೇಕ ಯುವ ಮನಸ್ಸುಗಳು ಕ್ರಿಯಾಶೀಲಗೊಂಡು ಮತ್ತಷ್ಟು ಪ್ರಜ್ವಲಿಸುವಂತಾಗಬೇಕು ಇದಕ್ಕೆ ಇಂತಹ ಶಿಬಿರಗಳನ್ನು ಸರಿಯಾಗಿ ಸದುಪಯೋಗಿಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯತ್ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣಪ್ರಸಾದ್ ಭಂಡಾರಿ ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಆಶಯದ ಮಾತುಗಳನ್ನಾಡಿದರು. ತಾಲೂಕು ಪಂಚಾಯತ್ ಸದಸ್ಯೆ ದಿವ್ಯ ಪುರುಷೋತ್ತಮ, ಬಲ್ನಾಡುಗ್ರಾಮ ಪಂಚಾಯತ್ ಅಧ್ಯಕ್ಷೆ ವಿನಯ, ತಾಲೂಕು ಪಂಚಾಯತ್‍ನ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಶಾಲಾ ಮುಖ್ಯಗುರು ಅನ್ನಪೂರ್ಣೇಶ್ವರಿ, ಎಸ್.ಡಿ.ಎಂ.ಸಿ. ಅಧ್ಯಕ್ಷೆ ಅನುರಾಧಾ ನಾಯ್ಕ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀನಾಥ್ ಸ್ವಾಗತಿಸಿದರು. ದೀಕ್ಷಿತ್ ಬಂದಾಜೆ ವಂದಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ವಿದ್ಯಾ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…